News Karnataka Kannada
Tuesday, May 07 2024
ಮೈಸೂರು

ಎಚ್‌ ಡಿಕೆ ಬಗ್ಗೆ ಮಾತನಾಡಿದ್ದಕ್ಕೆ ನನಗೆ ಬೆದರಿಕೆ ಕರೆ ಬಂದಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

Kpsccs
Photo Credit : News Kannada

ಮೈಸೂರು: ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಕುರಿತು ಮಾತನಾಡಿದ್ದಕ್ಕೆ ನನಗೆ ಬೆದರಿಕೆ ಕರೆ ಬಂದಿದೆ. ಇದಕ್ಕಾಗಿ ನನಗೆ ಪೊಲೀಸ್‌ ರಕ್ಷಣೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ಶನಿವಾರ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಮಾಡಿದ್ದು, ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ್ದೇನೆ. ನಾನು ಯಾವುದೇ ರೀತಿ ಅಸಂಬದ್ಧ ಪದ ಬಳಸಿಲ್ಲ.

ಆದರೆ ಶುಕ್ರವಾರ ನನ್ನ ಮೊಬೈಲ್‌ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಕುಮಾರಸ್ವಾಮಿ ಬಗ್ಗೆ ಮಾತನಾಡಿದ್ದಕ್ಕೆ ಜೀವ ಬೆದರಿಕೆ ಹಾಕಿರುತ್ತಾರೆ. ಶನಿವಾರ ಸಹ ಬೇರೆ ಬೇರೆ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಅವರು ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು