Categories: ಮೈಸೂರು

ಕಾಡುಹಂದಿ ಹಾವಳಿಗೆ ತತ್ತರಿಸಿದ ಕಾಡಂಚಿನ ರೈತರು

ಮೈಸೂರು: ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿರುವ ರೈತರಿಗೆ ಇದೀಗ ಕಾಡಾನೆ ಮಾತ್ರವಲ್ಲ ಕಾಡುಹಂದಿಗಳ ಕಾಟ ಆರಂಭವಾಗಿದ್ದು, ರಾತ್ರಿ ಹಗಲು ಎನ್ನದೆ ಜಮೀನಿಗೆ ನುಗ್ಗಿ ಫಸಲುಗಳನ್ನು ನಾಶ ಮಾಡುತ್ತಿವೆ ಎಂದು ಕಾಡಂಚಿನ ಗ್ರಾಮಗಳ ರೈತರು ಅಳಲು ತೋಡಿಕೊಂಡಿದ್ದಾರೆ.

ನಾಗರಹೊಳೆ ಕಾಡಂಚಿನ ಹುಣಸೂರು ತಾಲೂಕಿನ  ಹನಗೋಡು ಹೋಬಳಿಯ ಬಿ.ಆರ್ ಕಾವಲು 2ನೇ ಕಾಲೋನಿ ಗ್ರಾಮದ  ಸ್ವಾಮಿ ಎಂಬುವರಿಗೆ ಸೇರಿದ ಜಮೀನಿಗೆ ನುಗ್ಗಿದ ಕಾಡುಹಂದಿಗಳು ಮುಸುಕಿನ ಜೋಳ ಬೆಳೆಯನ್ನು ನಾಶಪಡಿಸಿವೆ. ಸ್ವಾಮಿ ಅವರು ಬೆಳೆದಿದ್ದ ಮುಸುಕಿನ ಜೋಳ ಸಮೃದ್ಧವಾಗಿ ಬೆಳೆದಿತ್ತು. ಆದರೆ  ಕಾಡುಹಂದಿಯ ದಾಳಿಯ ಪರಿಣಾಮ ಸಾವಿರಾರು ರೂ. ಮೌಲ್ಯದ ಜೋಳ ನಾಶವಾಗಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಕಾಡು ಪ್ರಾಣಿಗಳ ದಾಳಿಗೆ ಒಳಗಾಯಿತಲ್ಲ ಎಂದು ರೈತರು ಚಿಂತಾ ಕ್ರಾಂತರಾಗಿದ್ದಾರೆ. ಬೆಳೆ ನಾಶ ಹೊಂದಿರುವ ರೈತ ಸ್ವಾಮಿ ಯವರಿಗೆ ಬೆಳೆ ನಷ್ಟದ ಅಂದಾಜನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಡುಹಂದಿಗಳ ಹಾವಳಿ ಕುರಿತಂತೆ ಮಾತನಾಡಿರುವ ತಾ.ಪಂ.ಮಾಜಿ ಸದಸ್ಯೆ ರೂಪ ನಂದೀಶ್ ಅವರು,ಬಿ.ಆರ್ ಕಾವಲ್ ಗ್ರಾಮ ಸೇರಿದಂತೆ ಹನಗೋಡು ಭಾಗದ  ಸುತ್ತಮುತ್ತಲ ಗ್ರಾಮಗಳು ಕಾಡಂಚಿಗೆ ಹೊಂದಿಕೊಂಡಿದ್ದು, ರಾತ್ರಿಯಾದರೆ ನೇರವಾಗಿ ಜಮೀನಿಗೆ ಕಾಡು ಪ್ರಾಣಿಗಳು ಲಗ್ಗೆಯಿಡುತ್ತವೆ. ಇದರಿಂದ ಕಷ್ಟಪಟ್ಟು ಬೆಳೆದ ಬೆಳೆಗಳು ಕಾಡುಪ್ರಾಣಿಗಳ ದಾಳಿಗೆ ತುತ್ತಾಗುತ್ತಿವೆ. ಕೂಡಲೇ ಅರಣ್ಯ ಇಲಾಖೆಯವರು ಕಾಡುಹಂದಿ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Swathi MG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

3 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

3 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

3 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

3 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

4 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

4 hours ago