ಕೃಷ್ಣರಾಜಪೇಟೆ: ತಾಲೂಕಿನ ಮಾಕವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ಶಿಕ್ಷಕ ಸೇರಿದಂತೆ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸದ್ಯ ಸೋಂಕಿತರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 148 ವಿದ್ಯಾರ್ಥಿಗಳಿದ್ದು, ಈ ಪೈಕಿ ಶಿಕ್ಷಕರು ಸೇರಿದಂತೆ ಸುಮಾರು 98 ವಿದ್ಯಾರ್ಥಿಗಳ ಕೊರೊನಾ ಟೆಸ್ಟ್ ಮಾಡಲಾಗಿತ್ತು.ಈ ವೇಳೆ ಒಬ್ಬರು ಶಿಕ್ಷಕರು ಹಾಗೂ 15 ಮಂದಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಇನ್ನುಳಿದ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲು ಕ್ರಮ ಕೈಗೊಳ್ಳಲಾಗಿದೆ.ಆರೋಗ್ಯಾಧಿಕಾರಿಗಳ ಸೂಚನೆಯಂತೆ ಶಾಲಾ ಆವರಣದ ಸುತ್ತ ಸ್ಯಾನಿಟೈಸರ್ ಸಿಂಪಡಿಸಿ ಏಳು ದಿನ ಕಾಲ ಶಾಲೆಯನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಮಧುಸೂದನ್ ತಿಳಿಸಿದ್ದಾರೆ.
ಈ ಕುರಿತಂತೆ ಶಾಲಾ ಮುಖ್ಯಶಿಕ್ಷಕ ಲಿಂಗರಾಜು ಮಾತನಾಡಿ ನಮ್ಮ ಶಾಲೆಯ ಕೆಲವು ಮಕ್ಕಳು ಕೆಮ್ಮು ಸೀನು ಜ್ವರ ಹಿನ್ನೆಲೆಯಲ್ಲಿ ವ್ಯಾಕ್ಸಿನೇಷನ್ ಸಂದರ್ಭದಲ್ಲೇ ಶಾಲಾವರಣದಲ್ಲಿ ಟೆಸ್ಟ್ ಮಾಡಿಸಿದ್ದೆವು ಇದರಲ್ಲಿ ಓರ್ವ ಶಿಕ್ಷಕ ಹಾಗೂ 15 ಮಕ್ಕಳಿಗೆ ಪಾಸಿಟಿವ್ ಬಂದಿದೆ ಇದು ತಿಳಿಯುತ್ತಿದ್ದಂತೆಯೇ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.