Categories: ಮೈಸೂರು

ಕೆ.ಆರ್. ಪೇಟೆಯಲ್ಲಿ ಮಳೆ ಗಾಳಿಗೆ ಭಾರೀ ಹಾನಿ

ಕೆ.ಆರ್.ಪೇಟೆ: ತಾಲೂಕಿನಲ್ಲೆಡೆ ಎಡೆಬಿಡದೆ ಸುರಿದ ಮಳೆಬಿರುಗಾಳಿಗೆ ಮನೆಯ ಛಾವಣಿ ಕುಸಿತ, ಅಡಿಕೆ, ಬಾಳೆ, ತೆಂಗು  ಮರಗಳು ನೆಲಕ್ಕುರುಳಿ ಭಾರೀ ಹಾನಿಯಾಗಿರುವ ಘಟನೆ ನಡೆದಿದೆ.

ಗಂಜಿಗೆರೆ ಗ್ರಾಮದ ಮಂಜುನಾಥ್ ಅವರ ಮನೆಯ ಮೇಲೆ ಮರ ಬಿದ್ದು ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಮನೆ  ಸಂಪೂರ್ಣ ಜಖಂಗೊಂಡಿದೆ. ಇದೇ ಗ್ರಾಮದ ಸೋಮಶೇಖರ್ ಆರಾಧ್ಯ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮೇಲ್ಚಾವಣಿ ಕುಸಿದು ಮಳೆಯ ನೀರಿನಿಂದ ವಿದ್ಯುತ್ ಉಪಕರಣಗಳು ಸೇರಿದಂತೆ ಲಕ್ಷಾಂತರ ನಷ್ಟವಾಗಿದೆ. ಇದೇ ಗ್ರಾಮದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮನೆಯ ಮೇಲ್ಚಾವಣಿ ಕುಸಿದಿವೆ.

ಇನ್ನು ಕುರುಬಹಳ್ಳಿ ಗ್ರಾಮದ ಪುಟ್ಟೇಗೌಡ ಅವರ ಜಮೀನಿನಲ್ಲಿ ನಿರ್ಮಿಸಿಕೊಂಡಿದ್ದ ಜಾನುವಾರು ಕೊಟ್ಟಿಗೆ ವರುಣನ  ಆರ್ಭಟದಿಂದ ಕುಸಿದ ಪರಿಣಾಮ ಒಳಗೆ ಇದ್ದಂತಹ ವೃದ್ಧೆ  ನಂಜಮ್ಮ ಮತ್ತು ಲಕ್ಷ್ಮಮ್ಮ ಅವರ ಮೇಲೆ ಬಿದ್ದು ಗಾಯಗೊಂಡಿದ್ದು ಅವರನ್ನು ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗ್ರಾಮದ ನೀರುಗಂಟಿ ಪವನ್ ತಿಳಿಸಿದ್ದಾರೆ.

ಐಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬು ಅವರ ೪೦ಸಾವಿರ ಬೆಲೆಬಾಳುವ ಎಮ್ಮೆ ಸಿಡಿಲು ಮಳೆಗೆ ಸ್ಥಳದಲ್ಲೇ  ಸಾವನ್ನಪ್ಪಿದೆ. ಇದೇ ಪಂಚಾಯಿತಿ ವ್ಯಾಪ್ತಿಯ ತಗಡೂರುನಲ್ಲಿ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಚಿಕ್ಕನಹಳ್ಳಿಯಲ್ಲಿ ನಾಲ್ಕೈದು ಮನೆಗಳ ಮೇಲ್ಛಾವಣಿ ಕುಸಿದಿದ್ದು, ಗ್ರಾಮಸ್ಥರು ಸೂಕ್ತ ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುರ ಗ್ರಾಮದ ಸರ್ಕಾರಿ ಶಾಲೆಯ ಗೋಡೆಯು ತುಂಬಾ ವರ್ಷಗಳಿಂದ ಶಿಥಿಲಗೊಂಡಿದ್ದು ಮಳೆಯಿಂದ ಶಾಲಾ ಗೋಡೆ ಕುಸಿದು ಬಿದ್ದಿರುವುದಾಗಿ ಗ್ರಾಪಂ ಸದಸ್ಯ  ವಸಂತಕುಮಾರ್ ತಿಳಿಸಿದ್ದಾರೆ.

ತಾಲೂಕು ದಂಡಾಧಿಕಾರಿ ಎಂ.ವಿ.ರೂಪ, ರಾಜಸ್ವ ನಿರೀಕ್ಷಕ ರಾಜಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಶ್ವೇತ, ಮಳೆಹಾನಿ  ಪ್ರದೇಶವನ್ನು ಪರಿಶೀಲನೆ ನಡೆಸಿದ್ದು ಪ್ರಕೃತಿ ವಿಕೋಪದಡಿಯಲ್ಲಿ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

18 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

29 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

36 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

39 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

50 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

60 mins ago