Categories: ಮೈಸೂರು

ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಜ.3ರಿಂದ ಮೈಸೂರಲ್ಲಿ ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳಿಗೆ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಜ.3ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು,  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಲಿದ್ದಾರೆ.

ಜ.3ರಂದು ಬೆಳಗ್ಗೆ 8.30ಕ್ಕೆ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 15 ರಿಂದ 18 ವರ್ಷದೊಳಗಿನ 1,47,279 ಮಕ್ಕಳನ್ನು ಗುರುತಿಸಲಾಗಿದ್ದು, ಶೈಕ್ಷಣಿಕ ಸಂಸ್ಥೆಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಲಸಿಕಾಕರಣವನ್ನು ಜ.3ರಿಂದ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 100 ಲಸಿಕಾ ತಂಡಗಳನ್ನು ರಚಿಸಲಾಗಿದ್ದು ಫಲಾನುಭವಿಗಳನ್ನು ಗುರುತಿಸಿರುವ ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ 15 ದಿನದ ಅವಧಿಯಲ್ಲಿ ಸಮಯೋಚಿತ ವೇಳಾ ಪಟ್ಟಿಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಯವರ ಸಹಕಾರದೊಂದಿಗೆ ಲಸಿಕಾಕರಣವನ್ನು ಕೈಗೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗಿದೆ.

ಮಕ್ಕಳು ಲಸಿಕೆ ಪಡೆದುಕೊಳ್ಳಲು ಕೋವಿನ್ ತಂತ್ರಾಂಶದಲ್ಲಿ ನೋಂದಾಯಿಸಲು ಆಗತ್ಯವಿರುವ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೋಷಕರ ಮೊಬೈಲ್ ಸಂಖ್ಯೆಯ ಮಾಹಿತಿಯನ್ನು ಲಸಿಕಾ ದಿನದಂದು ತರುವುದು ಕಡ್ಡಾಯವಾಗಿದೆ. ಕೋವಿಡ್-19 ಲಸಿಕೆಯ ಬಗ್ಗೆ ಪೋಷಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದೆ. 2007ನೇ ಇಸವಿಯಲ್ಲಿ ಜನಿಸಿರುವ ಮಕ್ಕಳು, ಮತ್ತು 2007ನೇ ಇಸವಿಗೂ ಮುನ್ನ ಜನಿಸಿದ್ದು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಪೋಷಕರು ಸ್ವಯಂ ಪ್ರೇರಿತವಾಗಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಬಹುದು.

ಜಿಲ್ಲೆಯಲ್ಲಿ ಇದುವರೆವಿಗೂ 44.50 ಲಕ್ಷ ಕೋವಿಡ್ ಲಸಿಕಾ ಡೋಸ್‌ಗಳನ್ನು ನೀಡಿ ರಾಜ್ಯದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಇದರಲ್ಲಿ 23.91 ಲಕ್ಷ ಮೊದಲನೇ ಡೋಸ್‌ಗಳನ್ನು 20.57 ಲಕ್ಷ 2ನೇ ಡೋಸ್‌ಗಳನ್ನು ನೀಡಲಾಗಿದೆ. ಇದೀಗ ಮಕ್ಕಳಿಗೂ ಲಸಿಕೆ ನೀಡುವ ಅಭಿಯಾನ ಆರಂಭವಾಗುತ್ತಿದೆ.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

8 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

9 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

31 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

41 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

43 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

54 mins ago