Categories: ಮೈಸೂರು

ಗುಬ್ಬಚ್ಚಿ ದಿನಾಚರಣೆಯಂದು ಪರಿಸರ ಜಾಗೃತಿ ಅಭಿಯಾನ

ಮೈಸೂರು: ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಸೈಕಲ್ ಅಭಿಯಾನವನ್ನು ಮಾ.20ರ ಭಾನುವಾರ ಬೆಳಗ್ಗೆ 7ರಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕುಕ್ಕರಹಳ್ಳಿ ಕೆರೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಬೇಸಿಗೆಯಲ್ಲಿ ಸಣ್ಣಪುಟ್ಟ ಪ್ರಾಣಿಪಕ್ಷಿಗಳನ್ನು ಬಿಸಿಲಿನ ತಾಪಮಾನದಿಂದ ಸಂರಕ್ಷಿಸಲು ಆಹಾರ ನೀರು ಒದಗಿಸುವಂತೆ ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪರಿಸರ ಸೈಕಲ್ ಜಾಗೃತಿ ಅಭಿಯಾನ ಮಾಹಿತಿಯ ಪ್ರಚಾರ ಸಾಮಗ್ರಿಗಳನ್ನು ವಿಶ್ವವಿದ್ಯಾಲಯ ಆವರಣದಲ್ಲಿ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ ಹೇಮಂತ್ ಕುಮಾರ್ ಅವರು ಬಿಡುಗಡೆಗೊಳಿಸಿದರು

ಬೇಸಿಗೆ ಆರಂಭವಾಗಿ ತಾಪಮಾನ ಹೆಚ್ಚುವುದರಿಂದ ನೀರಿನ ಹಾಹಾಕಾರ ಎಲ್ಲೆಡೆ ಕಂಡುಬರುತ್ತದೆ. ಮನುಷ್ಯರಿಗೆ ಮಾತ್ರವಲ್ಲದೆ, ಮಾತುಬಾರದ ಮೂಕ ಪ್ರಾಣಿಗಳೂ ನೀರಿಗಾಗಿ ಪರಿತಪಿಸುತ್ತಿರುತ್ತವೆ. ಇಂದಿನ ಕಾಲದಲ್ಲಿ ರಾಜ ಮಹಾರಾಜರು ನೀರಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವುದರ ಜೊತೆಗೆ ರಸ್ತೆ ಬದಿಯಲ್ಲಿ ಗಿಡ ಮರಗಳನ್ನು ನೆಟ್ಟು ನೀರಿನ ಅರವಟ್ಟಿಗೆಗಳನ್ನು ಇಡುತ್ತಿದ್ದರು ಎಂಬುವುದನ್ನು ಇತಿಹಾಸದ ಶಾಸನಗಳಿಂದ ತಿಳಿಯುತ್ತದೆ.

ಆದರೆ ಇಂದು ಕೆರೆ ಬಾವಿಗಳು ನೀರಿಲ್ಲದೆ ಬತ್ತಿ ಹೋಗುತ್ತಿವೆ ಅದಕ್ಕೆ ಕಾರಣ ಮಾನವ ತನ್ನ ದುರಾಶೆಗಳಿಗಾಗಿ ಕಾಡು ಗಿಡ ಮರಗಳನ್ನು ಕಡಿಯುತ್ತಿರುವುದರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಭೂಮಿಯಲ್ಲಿ ನೀರಿನ ಪ್ರಮಾಣವು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಕಡೆ ಯುವಪೀಳಿಗೆ ಮುಂದಾಗಬೇಕು ನಮ್ಮೆಲ್ಲರ ಮನೆಯ ಛಾವಣೆಯಲ್ಲಿ ನೀರು ಆಹಾರ ಕೊಟ್ಟು ಸಣ್ಣಪುಟ್ಟ ಪ್ರಾಣಿಪಕ್ಷಿಗಳಿಗೆ ಆಸರೆಯಾಗೋಣ ಎಂದರು,

ಇದೇ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಜೋಗಿ ಮಂಜು, ಮುಖ್ಯ ಅಧಿಕಾರಿ ಚೇತನ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಅಜಯ್ ಶಾಸ್ತ್ರಿ, ರಾಕೇಶ್ ಕುಂಚಿಟಿಗ, ದುರ್ಗಾಪ್ರಸಾದ್, ಮಂಜುನಾಥ್ ಇನ್ನಿತರರು ಹಾಜರಿದ್ದರು

Sneha Gowda

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

7 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

7 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

7 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

7 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

8 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

8 hours ago