ಮೈಸೂರು

ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿ ಮತ್ತೆ ರಾಜಮನೆತನದ ವಶಕ್ಕೆ

ಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್ ನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮೂಲಕ ಮೈಸೂರು ರಾಜ ಮನೆತನ ಸೇರಿದಂತೆ ಅಲ್ಲಿನ ಭೂ ಮಾಲೀಕರು ಕಾನೂನು ಹೋರಾಟದಲ್ಲಿ ಜಯ ಗಳಿಸಿದ್ದಾರೆ.
ಮೈಸೂರಿನ ಸರ್ವೆ ನಂಬರ್ 4 ಮಾತ್ರವಲ್ಲದೆ, ಚೌಡಳ್ಳಿ ಸರ್ವೆ ನಂಬರ್ 39 ಮತ್ತು ಆಲನಹಳ್ಳಿ ಸರ್ವೆ ನಂಬರ್ 41 ರಲ್ಲಿನ ಸುಮಾರು 2 ಸಾವಿರ ಎಕರೆ ಭೂಮಿಯಲ್ಲಿನ ಸ್ವಾಮ್ಯತೆಯ ಬಿ ಖರಾಬ್ ನ್ನು ಸರ್ಕಾರ ರದ್ದು ಮಾಡಿದೆ. ಈ ಮೂಲಕ ಈ ಸರ್ವೆ ನಂಬರ್ ಗಳ ಭೂಮಿ ಎ ಖರಾಬ್ ಆಗಿ ಪರಿವರ್ತನೆಗೊಂಡಿದೆ.ಬಿ ಖರಾಬ್ ಅಂದರೆ ಸರ್ಕಾರದ ಭೂ ಮಾಲಿಕತ್ವ ಹಾಗೂ ಎ ಖರಾಬ್ ಅಂದರೆ ಖಾಸಗಿಯವರ ಭೂ ಮಾಲೀಕತ್ವವಾಗಿದೆ.
ಎರಡು ಸಾವಿರ ಎಕರೆ ಭೂಮಿ ನಮ್ಮದು ಎಂದು ಮೈಸೂರು ರಾಜಮನೆತನ ತಮ್ಮ ಹಕ್ಕಿನ ವಾದ ಮಾಡಿದರೆ, ಇದು ನಮ್ಮ ಹಕ್ಕು ಎಂದು ಸರ್ಕಾರ ವಾದಿಸುತ್ತಿತ್ತು.ಕಾನೂನು ಹೋರಾಟದಲ್ಲಿ ಮೈಸೂರಿನ ಕೆಳ ನ್ಯಾಯಾಲಯದಿಂದ ಸುಪ್ರೀಂ ಕೋರ್ಟ್ ಮೈಸೂರು ರಾಜಮನೆತದ ಪರವಾಗಿ ತೀರ್ಪು ನೀಡಿದೆ. ಆದರೆ ಸರ್ಕಾರ ಮಾತ್ರ ಭೂ ಹಕ್ಕು ನಮ್ಮದು ಅಂತ ಮೇಲ್ಮನವಿ ಸಲ್ಲಿಸುತ್ತಿತ್ತು.ಅಂತಿಮವಾಗಿ ಹೈಕೋರ್ಟ್, ಖಾಸಗಿ ಭೂ ಮಾಲೀಕರಿಗೆ ಹಕ್ಕು ಪತ್ರ ನೀಡದಿದ್ದರೆ ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು,ಅಷ್ಟಾಗಿ ಕೂಡ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಅರ್ಜಿ ಅಂಗೀಕಾರಕ್ಕೂ ಮೊದಲೆ ಸರ್ಕಾರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರಕ್ಕೆ ಛೀಮಾರಿ ಹಾಕಿತು, ಹೈಕೋರ್ಟ್ ಆದೇಶ ಪಾಲಿಸದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿತು.ಈಗ ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅಡ್ವಕೇಟ್ ಜನರಲ್ ಅವರ ಸಲಹೆ ಮೇರೆಗೆ ಬಿ ಖರಾಬ್ ರದ್ದು ಮಾಡಿದೆ.ಈ ಮೂಲಕ ಸರ್ಕಾರ ಭೂ ಮಾಲೀಕರಿಗೆ ಖಾತೆ ಮಾಡಿಕೊಡಬೇಕಿದೆ.ರಾಜ ಮನೆತನದವರಿಂದ ಭೂಮಿ ಖರೀದಿ ಮಾಡಿದವರಿಗೂ ಕೂಡ ಸರ್ಕಾರ ಖಾತೆ ಮಾಡಿಕೊಡಬೇಕಿದೆ.

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago