Categories: ಮೈಸೂರು

ಚಿನ್ನದಂಗಡಿ ದರೋಡೆ, ಶೂಟೌಟ್‌ ಪ್ರಕರಣ: ತನಿಖೆ ಚುರುಕು, 4 ದಿನಗಳಲ್ಲಿ ಆರೋಪಿಗಳ ಬಂಧನ ಸಾಧ್ಯತೆ

ಮೈಸೂರು: ನಗರದ ವಿದ್ಯಾರಣ್ಯಂಪುರಂನ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ನಡೆದಿರುವ ದರೋಡೆಗೆ ಸಂಬಂಧಿಸಿದಂತೆ ಬುಧವಾರ ಕೂಡ ಪರಿಶೀಲನೆ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ರಚಿಸಿರುವ ತಂಡದ ಪೊಲೀಸರು ಬೆಂಗಳೂರು ಸೇರಿದಂತೆ ವಿವಿಧೆಡೆಗೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟುವ ಎಲ್ಲ ಸಾಧ್ಯತೆಗಳಿವೆ.
ಸೋಮವಾರ ಮದ್ಯಾಹ್ನ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೆಸ್ ಮಳಿಗೆಗೆ ನುಗ್ಗಿದ ದುಷ್ಕರ್ಮಿಗಳು, ಮಳಿಗೆಯಲ್ಲಿ ಚಿನ್ನಾಭರಣ ದೋಚಿದ್ದಲ್ಲದೆ ಗುಂಡು ಹಾರಿಸಿ ಅಮಾಯಕ ಯುವನೋರ್ವನನ್ನು ಹತ್ಯೆಗೈದಿದ್ದರು.ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೆಸ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ ಮಾಡಿದವರು ಅನ್ಯ ರಾಜ್ಯದವರು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದರೂ ಕೂಡ ಆರೋಪಿಗಳು ಇನ್ನು ರಾಜ್ಯದ ಗಡಿಯ ಒಳಗೇ ಇರಬಹುದು ಎಂಬ ಅನುಮಾನದ ಮೇಲೆ ಪೊಲೀಸರು ಬೆಂಗಳೂರು ಹಾಗೂ ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಆರೋಪಿಗಳ ಬೆನ್ನು ಹತ್ತಿದ ಪೊಲೀಸರ ತಂಡ ಪ್ರಾರಂಭಿಕ ಯಶಸ್ಸು ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿಗಳ ಬಗ್ಗೆ ಮಹತ್ವದ ಸುಳಿವನ್ನು ಪಡೆದಿರುವ ಪೊಲೀಸರ ತಂಡ ಅವರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದಿದ್ದಾರೆ ಎಂದು ಗೊತ್ತಾಗಿದೆ. ಹಗಲಿರುಳೆನ್ನದೆ ತನಿಖೆ ನಡೆಸುತ್ತಿರುವ ಪೊಲೀಸರು ಆದಷ್ಟು ಶೀಘ್ರವಾಗಿ ದುಷ್ಕರ್ಮಿಗಳನ್ನು ಬಂಧಿಸುವ ಹುಮ್ಮಸ್ಸಿನಲ್ಲಿದ್ದಾರೆ.ಇನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೆಸ್ ಮಾಲೀಕ ಧರ್ಮೇಂದ್ರ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

Indresh KC

Recent Posts

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

7 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

18 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

29 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

49 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago