News Karnataka Kannada
Wednesday, May 08 2024
ಮೈಸೂರು

ಜನರ ಆರೋಗ್ಯ ದೃಷ್ಠಿಯಿಂದ ಪಾದಯಾತ್ರೆ ಕೈಬಿಡಿ: ಸಚಿವ ಎಸ್.ಟಿ.ಸೋಮಶೇಖರ್

St Somshekar
Photo Credit :

ಮೈಸೂರು: ರಾಜ್ಯದಲ್ಲಿ ಈಗ ಕೊರೋನಾ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ಜನರ ಆರೋಗ್ಯದ ದೃಷ್ಟಿಯಿಂದ ಮೇಕೆದಾಟು ಯೋಜನೆ ಕಾಮಗಾರಿ ಆರಂಭಕ್ಕೆ ಆಗ್ರಹಿಸಿ ಜ.9 ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನ ಕೈ ಬಿಟ್ಟರೆ ಒಳ್ಳೆಯದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಸೋಮವಾರ ಮೈಸೂರಿನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯ, ದೇಶಗಳಿಂದ ಬರುತ್ತಿರುವವರಿಂದ ಕೊರೋನಾ ರೂಪಾಂತರಿ ಒಮಿಕ್ರಾನ್ ವೇಗವಾಗಿ ರಾಜ್ಯದ ಲ್ಲಿ ಹರಡುತ್ತಿದೆ.ಈಗಾಗಲೇ ಎರಡನೇ ಅಲೆಯಲ್ಲಿ ಸಾಕಷ್ಟು ಕಷ್ಟ, ನೋವು ಅನುಭವಿಸಿದ್ದೇವೆ.ಮೂರನೇ ಅಲೆಯಲ್ಲಿ ಹಾಗಾಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪಾದಯಾತ್ರೆ ಯನ್ನು ಕೈಬಿಡಬೇಕು ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಮಾಡಲು ಏನು ಕೆಲಸ ಇಲ್ಲ. ಪಾದಯಾತ್ರೆ ಒಂದು ಚುನಾವಣೆ ಗಿಮಿಕ್ಸ್‌. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಯೋಜನೆ ಬಗ್ಗೆ ಮಾತನಾಡಲಿಲ್ಲ. ಜತೆಗೆ ಇಷ್ಟು ವರ್ಷ ಏನು ಮಾಡಲಿಲ್ಲ. ಈಗ ರಾಜಕೀಯ ಕಾರಣಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದು ಸಚಿವರು ಟಾಂಗ್​​ ನೀಡಿದರು.

ರಾಜ್ಯದಲ್ಲಿ ಲಾಕ್​​​ಡೌನ್ ವಿಚಾರದಲ್ಲಿ ಕೇಂದ್ರ ಹಾಗೂ ತಜ್ಞರ ಸಲಹೆಯ ಮೇರೆಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ತಜ್ಞರು ಕಠಿಣ ಕ್ರಮ ಸೇರಿದಂತೆ, ಏನೇ ಸಲಹೆ ಕೊಟ್ಟರೂ ಪಾಲಿಸುತ್ತೇವೆ. ಸದ್ಯಕ್ಕೆ ಬೇರೆ ರಾಜ್ಯದಷ್ಟು ಸಮಸ್ಯೆ ನಮ್ಮಲ್ಲಿ ಆಗಿಲ್ಲ. ಜನರು ಸಹಕಾರ ನೀಡುತ್ತಿದ್ದಾರೆ. ಎರಡು ದಿನಕ್ಕೊಮ್ಮೆ ಸಿಎಂ ತಜ್ಞರ ಸಭೆ ನಡೆಸುತ್ತಿದ್ದಾರೆ. 2ನೇ ಅಲೆಯಿಂದ ಆದ ಅನಾಹುತದಿಂದ ಜನರು ಎಚ್ಚೆತ್ತುಕೊಂಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು