News Karnataka Kannada
Monday, April 29 2024
ಮೈಸೂರು

ಜಿ.ಟಿ.ದೇವೇಗೌಡರಿಗೆ ಪ್ರಧಾನಿ ಮೋದಿ ಪತ್ರ

Modi
Photo Credit :

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅವರ ಮೂರು ವರ್ಷದ ಮೊಮ್ಮಗಳು ಗೌರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗೌರಿ ಎರಡು ವಾರದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಳು.

ನಿಮ್ಮ ಮೊಮ್ಮಗಳು ಗೌರಿ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ  ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು.

ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟ ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ. ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ.

ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು