News Karnataka Kannada
Monday, April 29 2024
ಮೈಸೂರು

ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಸಿದ್ದರಾಮಯ್ಯ: ಪ್ರತಾಪ್ ಸಿಂಹ

Prathap Simha
Photo Credit :

ಮೈಸೂರು: ಡಾ.ಜಿ. ಪರಮೇಶ್ವರ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಸಿದ್ದರಾಮಯ್ಯ, ಕೆ.ಹೆಚ್. ಮುನಿಯಪ್ಪ, ಖರ್ಗೆರನ್ನು ಸೋಲಿಸಿದ್ದೇ ಸಿದ್ದರಾಮಯ್ಯ, ಇದು ದಲಿತ ಸಮಾಜಕ್ಕೆ ಸಿದ್ದರಾಮಯ್ಯನವರು ಕೊಟ್ಟ ಕೊಡುಗೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತ್ತೊಮ್ಮೆ ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಯಾವ ರಾಜ್ಯದಲ್ಲಿ ಸಿಎಂ ಆಗ್ತಾರೆ ಎಂಬುದು ನನಗೆ ಗೊತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಿದ್ದಾರೆ. ಸಿದ್ದರಾಮಯ್ಯಗೆ ಮುಸ್ಲಿಮರ ಬಗ್ಗೆ ಮಾತ್ರ ವಿಶೇಷ ಕಾಳಜಿ ಇದೆ. ಮುಸ್ಲಿಮರ ಬಗ್ಗೆ ಕಾಳಜಿ ಇದೆ ಹೊರತು ದಲಿತ ಸಮಾಜದ ಮೇಲಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು