ಮೈಸೂರು

ಜೂನ್‌ ನಲ್ಲಿ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನರಾರಂಭ

ಮೈಸೂರು: ಕಳೆದ ಹಲವು ವರ್ಷಗಳಿಂದ ಸ್ಥಗಿತವಾಗಿದ್ದ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯಲ್ಲಿ 2022ರ ಜೂನ್ ತಿಂಗಳಿನಿಂದ ಕಬ್ಬು ಅರೆಯುವ ಕಾರ್ಯ ಆರಂಭವಾಗಲಿದೆ.

ಶ್ರೀರಾಮ ಸಕ್ಕರೆ ಕಾರ್ಖಾನೆ ಹಾಗೂ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನರಾರಂಭ ಸಂಬಂಧ ಬೆಳಗಾವಿಯ ಸುವರ್ಣಸೌಧದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಕೂಡಲೇ ಪ್ರಾರಂಭ ಮಾಡಲು ಟೆಂಡರ್‌ದಾರರಿಗೆ ನೋಂದಣಿ ಶುಲ್ಕ 8 ಕೋಟಿ ರೂ.ಮನ್ನಾ ಮಾಡಲು ಒಂದು ವಾರದಲ್ಲಿ ಕ್ಯಾಬಿನೆಟ್‌ಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು.

ಕಾರ್ಖಾನೆಗೆ ಸೇರಿದ 125 ಎಕರೆ ಪೈಕಿ 85 ಎಕರೆ ಭೂಮಿ ಸರ್ಕಾರಕ್ಕೆ ಅಡಮಾನ ಆಗಿರುವ ಜಮೀನನ್ನು ಕೈಬಿಡುವ ಬಗ್ಗೆ ಮತ್ತು ಟೆಂಡರ್‌ದಾರರಿಗೆ 125 ಎಕರೆ ಜಾಗದ ಮೇಲೆ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಟೆಂಡರ್ ಷರತ್ತಿಗೆ ವಿನಾಯಿತಿ ನೀಡಲು ಕಾರ್ಖಾನೆಯ ವಾರ್ಷಿಕ ಮಹಾಸಭೆಯ ಅನುಮೋದನೆ ಪಡೆದು ಸರ್ಕಾರಕ್ಕೆ ಸಲ್ಲಿಸಲು ಹಾಗೂ ಸರ್ಕಾರದಿಂದ ಮಹಾಸಭೆಯ ನಿರ್ಣಯದಂತೆ ಸಚಿವ ಸಂಪುಟಕ್ಕೆ ಮಂಡಿಸಲು ನಿರ್ಣಯಿಸಲಾಯಿತು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಸಾ.ರಾ.ಮಹೇಶ್, ಕೆ.ಮಹದೇವು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸಕ್ಕರೆ ಆಯುಕ್ತ ಶಿವಾನಂದ ಕಲ್ಕೆರಿ, ಶ್ರೀರಾಮ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್ ಹಾಜರಿದ್ದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago