Categories: ಮೈಸೂರು

ಜೂ.21 ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚನೆ

ಮೈಸೂರು: ಜೂ.21ರ ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವುದರಿಂದ ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಂಗಳವಾರ ನಗರದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಪಕ್ಷದ ಶಾಸಕರು, ಸಂಸದರು, ಯೋಗ ತರಗತಿಗಳ ಮುಖ್ಯಸ್ಥರನ್ನು ಸಮಿತಿ ಒಳಗೊಂಡಿರಲಿದೆ ಎಂದರು.

ಯೋಗ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮವಾಗಿಲ್ಲ. ಮೇ 30ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಲಿದ್ದು ಅವರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಮೊದಲ ಬಾರಿಗೆ ಪ್ರಧಾನಿಗಳು ಆಗಮಿಸುತ್ತಿರುವುದರಿಂದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಚನೆಯಾಗುವ ಸಮಿತಿ ಕ್ರಮವಹಿಸುತ್ತದೆ. ಈ ಕಾರ್ಯಕ್ರಮ ವಿಶ್ವದಾದ್ಯಂತ ಪ್ರಸಾರವಾಗಲಿದೆ.

ಇದರಿಂದ ಸಾಂಸ್ಕೃತಿಕ ನಗರಿಯ ಖ್ಯಾತಿ ವಿಶ್ವಕ್ಕೆ ಪಸರಿಸಲಿದೆ. ಮೈಸೂರಿನ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದರು.
ಬೆಂಗಳೂರು, ಮಂಡ್ಯ ಸೇರಿದಂತೆ ನಾನಾ ಜಿಲ್ಲೆಗಳ ಯೋಗ ತರಗತಿಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕತೆ ತೋರುತ್ತಿದ್ದಾರೆ. ಸ್ಥಳ ಅಂತಿಮವಾದ ಬಳಿಕ ಎಷ್ಟು ಸಂಖ್ಯೆಯಲ್ಲಿ ಯೋಗಪಟುಗಳನ್ನು ಸೇರಿಸಬಹುದು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಎಸ್ .ಎ.ರಾಮದಾಸ್, ಮೂಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago