News Karnataka Kannada
Friday, May 03 2024
ಮೈಸೂರು

‘ಜೇಮ್ಸ್’ ಸಂಭ್ರಮಾಚರಣೆ ವೇಳೆ ಅಭಿಮಾನಿ ಹೃದಯಾಘಾತದಿಂದ ನಿಧನ

Child Death
Photo Credit :

ನಂಜನಗೂಡು:  ನಂಜನಗೂಡು ತಾಲೂಕಿನ ಯಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಸಂಭ್ರಮಾಚರಣೆ ಸಂದರ್ಭದಲ್ಲಿ ಹೃದಯಾಘಾತದಿಂದ ಅಭಿಮಾನಿ ಮೃತಪಟ್ಟ ಘಟನೆ  ನಡೆದಿದೆ.

22 ವರ್ಷದ ಆಕಾಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಅವರ ಪುತ್ರರಾದ ಆಕಾಶ್ ಬಸ್ ನಿಲ್ದಾಣದ ಸಮೀಪ ಅಪ್ಪು ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಭ್ರಮಾಚರಣೆಯಲ್ಲಿ ಅವರು ಡ್ಯಾನ್ಸ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು