Categories: ಮೈಸೂರು

ಟಿಪ್ಪು ಎಕ್ಸ್‌ಪ್ರೆಸ್ ಬದಲು ಒಡೆಯರ್ ಹೆಸರಿಡಿ:ಸಂಸದ ಪ್ರತಾಪ್ ಸಿಂಹ

ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆ ಪ್ರತೀಕವಾಗಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೆಸರಿಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಲಿಖಿತ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ಮೈಸೂರು-ಬೆಂಗಳೂರು ನಡುವೆ ಪ್ರತಿನಿತ್ಯ ಸೇವೆ ನೀಡುತ್ತಿರುವ ಟಿಪ್ಪು ಎಕ್ಸ್‌ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ ಎಂದು ಬದಲಾಯಿಸಿ ಮೈಸೂರು ಒಡೆಯರಿಗೆ ಗೌರವ ಸಲ್ಲಿಸಬೇಕೆಂದು ಕೋರಿದ್ದಾರೆ.

ಮೈಸೂರು ರಾಜ್ಯ ಬೆಂಗಳೂರು-ಮೈಸೂರು ನಡುವೆ 1870ರಲ್ಲಿ ಯೋಜನೆ ರೂಪಿಸಲಾಯಿತು.1882ರ ಫೆ.25ರಂದು ರೈಲ್ವೆ ಸೇವೆ ಆರಂಭವಾಯಿತು. 10ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ರೈಲ್ವೆ ಅಭಿವೃದ್ಧಿಗೆ ಮಹತ್ತರ ಕಾಣಿಕೆ ನೀಡಿದ್ದಾರೆ.

ಜತೆಗೆ ಮೈಸೂರು ರೈಲ್ವೆ ನಿಲ್ದಾಣವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ರೈಲ್ವೆ ನಿಲ್ದಾಣವೆಂದು ಮರು ನಾಮಕರಣ ಮಾಡಬೇಕೆಂದೂ ಮನವಿ ಮಾಡಿದ್ದಾರೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

31 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

47 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

59 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago