ಮೈಸೂರು

ಡಿ.ಬಿ.ಕುಪ್ಪೆಯಲ್ಲಿ ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ

ಮೈಸೂರು: ಗಾಂಜಾದ ಕಮಟು ವಾಸನೆ ಗ್ರಾಮೀಣ ಪ್ರದೇಶವನ್ನು ವ್ಯಾಪಿಸಿದ್ದು, ವ್ಯಸನಿಗಳಿಗೆ ಕೆಲವರು ಮನೆಯಲ್ಲಿಟ್ಟುಕೊಂಡೇ  ಮಾರಾಟ ಮಾಡುತ್ತಿರುವುದು ಇದೀಗ ಬಯಲಾಗುತ್ತಿದೆ.

ಪಟ್ಟಣ ಪ್ರದೇಶದಿಂದಲೇ ಹಳ್ಳಿಗಳಿಗೆ ಗಾಂಜಾ ರವಾನೆಯಾಗುತ್ತಿದ್ದು, ಇದರ ರುಚಿ ಹತ್ತಿಸಿಕೊಂಡವರು ಸೇವನೆ ಮಾಡುವ ಮೂಲಕ ವ್ಯಸನಿಗಳಾಗುತ್ತಿದ್ದರೆ, ಕೆಲವರು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದಾರೆ.

ಈ ನಡುವೆ ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ಬಂಧಿಸಿ 2.28 ಕೆ.ಜಿ ಗಾಂಜಾ ವಶಪಡಿಕೊಳ್ಳಲಾಗಿದೆ.

ನಾಗರಿಕರ ಫೋನ್ ಕರೆಯನ್ನು ಆಧರಿಸಿ ಅಂತರಸಂತೆ ಪೊಲೀಸ್ ಠಾಣೆಯ ಪಿಎಸ್ಐ ಡಿ.ಬಿ.ಜಯಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಅಕ್ರಮಗಳು ನಡೆಯುತ್ತಿರುವ ಕುರಿತು ದೂರು ನೀಡಿ ಸಹಕರಿಸಬೇಕು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್ಪಿ ಚೇತನ್ ತಿಳಿಸಿದ್ದಾರೆ.

Gayathri SG

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

3 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

28 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

36 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

53 mins ago