Categories: ಮೈಸೂರು

ತಿ.ನರಸೀಪುರದಲ್ಲಿ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿನಿ ಸಾವು

ಮೈಸೂರು: ಶೈಕ್ಷಣಿಕ ಹಂತದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಉನ್ನತ ವ್ಯಾಸಂಗದ          ಕನಸು ಹೊತ್ತು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದಲ್ಲೇ ಮೃತಪಟ್ಟಿರುವ ಮನ ಕಲಕುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಅವರ ಪುತ್ರಿ ಅನುಶ್ರೀ (೧೬) ಮೃತ ವಿದ್ಯಾರ್ಥಿನಿ. ಈಕೆ ಸೋಮವಾರ ಬೆಳಗ್ಗೆ ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆಯುವಾಗ ನೋಂದಣಿ ಸಂಖ್ಯೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಬೇರೆ ಸ್ಥಳದಲ್ಲಿ ಕುಳಿತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅಲ್ಲಿಯೇ ಇದ್ದ ಶಿಕ್ಷಕರು ಪರೀಕ್ಷ ಕೊಠಡಿ ಮೇಲ್ವಿಚಾರಕು ಆಕೆಗೆ ನಿಗದಿಯಾಗಿದ್ದ ಕೊಠಡಿಗೆ ಕರೆದೊಯ್ಯುವಾಗ ಆತಂಕಗೊಂಡಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಈ ವೇಳೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧೆಯೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ತಿ. ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಅವರ  ಪುತ್ರಿಯಾದ ಅನುಶ್ರೀ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದಳು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದ ಈಕೆ ಪರೀಕ್ಷೆ ಕೇಂದ್ರದಲ್ಲಿ ನೊಂದಣಿ ಸಂಖ್ಯೆಯ ಕೊನೆ ಅಂಕಿಗಳನ್ನು ಮಾತ್ರ ನೋಡಿ ಗೊಂದಲ ಮಾಡಿಕೊಂಡು ಪಕ್ಕದ ಶಿವಾನಂದ  ಶರ್ಮ ಆಂಗ್ಲ ಮಾಧಮ ಶಾಲೆಯಲ್ಲಿನ ಕೇಂದ್ರದಲ್ಲಿ ಕುಳಿತು ಸುಮಾರು ಹದಿನಯದು ನಿಮಿಷ ಪರೀಕ್ಷೆ ಬರೆದಿದ್ದಾಳೆ.

ಈ ಸಂದರ್ಭ ಆಕೆ ಬೇರೆ ವಿದ್ಯಾರ್ಥಿಯ ನೋಂದಣಿ ಸಂಖ್ಯೆ ಇರುವ ಸ್ಥಳದಲ್ಲಿ ಕುಳಿತಿರುವುದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕ ಆಕೆಗೆ ಮನವರಿಕೆ ಮಾಡಿ ಪಕ್ಕದಲಲೇ ಇದ್ದ ಕೇಂದ್ರಕ್ಕೆ ಕರೆದೊಯ್ಯುವಾಗ ಕುಸಿದು ಬಿದಿದ್ದಾಳೆ. ಕೂಡಲೇ ಆಕೆಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವಿದ್ಯಾರ್ಥಿನಿ ಮಾರ್ಗಮಧೆಯೇ ಮೃತ ಪಟ್ಟಿದ್ದಾಳೆ ಎಂದು ವೈದ್ಯರು ದಢೀಕರಿಸಿದರು.

ವಿಷಯ ತಿಳಿದ ಕೂಡಲೇ ಕ್ಷೇತ್ರ ಶಿPಣಾಧಿಕಾರಿ ಮರಿಸ್ವಾಮಿ, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ವೃತ್ತ ನಿರೀಕ್ಷ ಕೃಷ್ಣಪ್ಪ  ಮತ್ತಿತರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೈಸೂರಲ್ಲಿ ಮರಣೋತ್ತರ ಪರೀಕ್ಷೆ: ಮೃತ ವಿದ್ಯಾರ್ಥಿನಿಯ ದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರದಲ್ಲಿ  ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮೃತಳ ಕುಟುಂಬಕ್ಕೆ ವಿದ್ಯಾರ್ಥಿನಿಯ ದೇಹವನ್ನು ಹಸ್ತಾಂತರ ಮಾಡಲಾಯಿತು.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

41 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago