Categories: ಮೈಸೂರು

ನಂಜಾಪುರದಲ್ಲಿ ಮಾರಮ್ಮನಿಗೆ ತಂಬಿಟ್ಟಿನ ಆರತಿ

ಹುಣಸೂರು: ಬಯಲು ಸೀಮೆಯಲ್ಲೀಗ ಮಾರಮ್ಮನ ಜಾತ್ರೆ ನಡೆಯುತ್ತಿದ್ದು, ಅದರಂತೆ ತಾಲೂಕಿನ ನಂಜಾಪುರದ ಗ್ರಾಮ ದೇವತೆ  ಶ್ರೀ ಮಾರಮ್ಮ ದೇವಿಯ ಉತ್ಸವವು  ಗ್ರಾಮಾದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಗ್ರಾಮಸ್ಥರು ದೇವಿಗೆ ತಂಬಿಟ್ಟಿನ ಆರತಿ ಮಾಡಿ ಸೇವೆ ಅರ್ಪಿಸಿದರು.

ಜಾತ್ರೆ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ದೇವರಿಗೆ ವಿವಿಧ ಪೂಜೆಗಳನ್ನು ನೆರವೇರಿಸಿದರು.ಮೆರವಣಿಗೆ ಮೊದಲು ಗ್ರಾಮದಲ್ಲಿ ಹರಿಯುವ ಕಾಲುವೆಯಲ್ಲಿ ಪೂಜೆ ಸಲ್ಲಿಸಿದ ನಂತರ ದೇವರ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಗ್ರಾಮದ ಬೀದಿಗಳಲ್ಲಿ ದೇವಿಯ ಉತ್ಸವದ ಮೆರವಣಿಗೆ ನಡೆಯಿತು.ಜಾತ್ರೆ ಪ್ರಯುಕ್ತ ಆರು ನೂರಕ್ಕೂ ಹೆಚ್ಚು ಮಂದಿ ಮಕ್ಕಳು ಮತ್ತು ಹೆಂಗೆಳೆಯರು ತಂಬಿಟ್ಟನ್ನು ತಲೆ ಮೇಲೆ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಕೆಲ ಪುರುಷರು ಸಹ ವಿವಿಧ ಮಾದರಿಯ ತಂಬಿಟ್ಟು  ತಟ್ಟೆಯನ್ನು ತಲೆ ಮೇಲೆ ಹೊತ್ತು  ಮೆರವಣಿಗೆಯೊಂದಿಗೆ ದೇವಸ್ಥಾನದ ಬಳಿಗೆ ತೆರಳಿದರು.

ಹಬ್ಬದ ಹಿನ್ನಲೆಯಲ್ಲಿ ಗ್ರಾಮಕ್ಕೆ ನೆಂಟರಿಷ್ಟರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.

Swathi MG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

37 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

53 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

1 hour ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

1 hour ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago