News Karnataka Kannada
Saturday, April 27 2024
ಮೈಸೂರು

ನಕಲಿ ನಂದಿನಿ ತುಪ್ಪ ಹಗರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

Nakali Tuppa
Photo Credit :

ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ನಂದಿನಿ ತುಪ್ಪದ ವಿಶ್ವಾಸರ್ಹತೆಗೆ ಧಕ್ಕೆಯಾಗಿದ್ದು,ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು  ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ನಂದಿನಿ ಹಾಲು ಮತ್ತು ಉತ್ಪನ್ನಗಳ ಬಗ್ಗೆ ಸಾರ್ವಜನಿಕರು ವಿಶ್ವಾಸ ಹೊಂದಿದ್ದರು.  ಮೈಸೂರು ತಾಲೂಕು ಹೊಸಹುಂಡಿಯಲ್ಲಿ ನಡೆದಿರುವ ನಂದಿನಿ ತುಪ್ಪದ ಕಲಬೆರಕೆಯಿಂದಾಗಿ ಆ ವಿಶ್ವಾಸಕ್ಕೆ ಧಕ್ಕೆ ಬಂದಿದೆ. ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಹಾಲಿಗೆ ನೀರು ಬೆರೆಸಿರುವ ಪ್ರಕರಣ ಬೆಳಕಿಗೆ ಬಂದು ಜನ ಸಂಶಯದ ದೃಷ್ಟಿಯಿಂದ ನೋಡುವಂತಾಗಿತ್ತು. ಈ ಕಲಬೆರಕೆ ಹಗರಣದಲ್ಲಿ ದಂಧೆಕೋರರು ಅಲ್ಲದೆ ಮೈಮುಲ್ ಡೈರಿಯ ಕೆಲವು ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಕೆಲವರು ಭಾಗಿಯಾಗಿರಬಹುದಾದ ಸಂಶಯಗಳು ಎದ್ದು ಕಾಣುತ್ತಿದ್ದು ಜನ ಆತಂಕಪಡುವಂತಾಗಿದೆ.

ಈ ಹಗರಣ ಕೇವಲ ಹೊಸಹುಂಡಿಯಲ್ಲಷ್ಟೇ ಬೇರೆ ಕಡೆಯೂ ವ್ಯಾಪಕವಾಗಿ ನಡೆದಿರುವ ಅನುಮಾನಗಳಿವೆ. ಈ ಕಾರಣ ಸರ್ಕಾರ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಈ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಪತ್ತೆ ಹಚ್ಚಬೇಕು ಮತ್ತು ಇವರುಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜರುಗಿಸಿ ಇಂತಹ ಹಗರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಹೊಸಕೋಟೆ ಬಸವರಾಜ್, ಜಿಲ್ಲಾ ಮಹಿಳಾ ಅಧ್ಯಕ್ಷೆ ನೇತ್ರಾವತಿ, ಮುಖಂಡರಾದ ಎಂ.ಎಸ್.ಅಶ್ವತ್ಥನಾರಾಯಣ ರಾಜೇ ಅರಸ್, ಪ್ರಸನ್ನ ಎನ್.ಗೌಡ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್, ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್, ಕಾರ್ಮಿಕ ಸಂಘಟನೆಯ ಚಂದ್ರಶೇಖರ ಮೇಟಿ, ಜನಾಂದೋಲನಗಳ ಮಹಾಮೈತ್ರಿಯ ಉಗ್ರನರಸಿಂಹೇಗೌಡ, ಅಭಿರುಚಿ ಗಣೇಶ್, ಕೆ.ಕರುಣಾಕರನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು