Categories: ಮೈಸೂರು

ನಾಗರಹೊಳೆ ಕಾಡಂಚಿನ ಜಮೀನಿನಲ್ಲಿ ಹುಲಿಹೆಜ್ಜೆ ಪತ್ತೆ

ಹುಣಸೂರು:ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ  ಗ್ರಾಮದ ಜನರಿಗೆ ಮತ್ತೆ ಹುಲಿಯ ಭೀತಿ ಎದುರಾಗಿದೆ. ಈ ವ್ಯಾಪ್ತಿಯಲ್ಲಿ ಹುಲಿಯ ಉಪಟಳ ಹೊಸತೇನಲ್ಲ. ಆಗಾಗ್ಗೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಾ ಗ್ರಾಮಸ್ಥರ ನಿದ್ದೆಗೆಡಿಸುತ್ತಲೇ ಬರುತ್ತಿದೆ.

ಆಗೊಮ್ಮೆ ಈಗೊಮ್ಮೆ ಕಾಣಿಸುವ ಹುಲಿಗಳು ರೈತರ ಜಾನುವಾರಗಳ ಮೇಲೆ ದಾಳಿ ಮಾಡುತ್ತಲೇ ಇರುತ್ತವೆ. ಕೆಲವೊಮ್ಮೆ ಜನರ ಮೇಲೆಯೂ ದಾಳಿ ಮಾಡಿದ ನಿದರ್ಶನಗಳಿವೆ. ಈ ಸಂದರ್ಭ ಅವುಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದ್ದೂ ಇದೆ. ಇನ್ನು ಕೆಲವು ಹುಲಿಗಳು ಚಳ್ಳೆ ಹಣ್ಣು ತಿನ್ನಿಸಿ ಯಾರಿಗೂ ಸಿಗದೆ ಓಡಾಡಿಕೊಂಡಿರುತ್ತವೆ.

ಇದೀಗ ಕಾಡಂಚಿನ ಶೆಟ್ಟಳ್ಳಿ  ಗ್ರಾಮದ ರೈತರ ಜಮೀನಿನಲ್ಲಿ ಹುಲಿಯೊಂದರ ಹೆಜ್ಜೆ ಪತ್ತೆಯಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ.ಸಾಮಾನ್ಯವಾಗಿ ಗ್ರಾಮದಲ್ಲಿ ಹೆಚ್ಚಿನ ಜನರು ಕೃಷಿ ಮತ್ತು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಹುಲಿಯ ಹೆಜ್ಜೆ ಪತ್ತೆಯಾದ ಬಳಿಕ ಜಮೀನಿಗೆ ತೆರಳಲು ಭಯಪಡುವಂತಾಗಿದೆ. ಕಚುವಿನಹಳ್ಳಿ ವಲಯ ವ್ಯಾಪ್ತಿಯ ಶೆಟ್ಟಳ್ಳಿ ಅರಣ್ಯದಂಚಿನಲ್ಲಿದ್ದು, ಇಲ್ಲಿನ ಕೃಷ್ಣ ನಾಯ್ಕ ಎಂಬುವರ ಜಮೀನಿನಲ್ಲಿ  ಹುಲಿ ಓಡಾಟ ನಡೆಸಿದ್ದು ಇದಕ್ಕೆ ಅಲ್ಲಿ ಪತ್ತೆಯಾಗಿರುವ ಅದರ ಹೆಜ್ಜೆಗಳು ಸಾಕ್ಷಿಯಾಗಿವೆ.

ಇನ್ನೊಂದೆಡೆ  ರಾತ್ರಿ   ರೈತರು ಜಮೀನುಗಳಿಗೆ ನೀರು ಹಾಯಿಸಲು ತೆರಳಿದ ವೇಳೆ  ಹುಲಿ ಘರ್ಜಿಸುವ ಶಬ್ದವೂ  ಕೇಳಿ ಬಂದಿದೆ. ಹೀಗಾಗಿ ಗ್ರಾಮ ವ್ಯಾಪ್ತಿಯಲ್ಲಿ ಅಡ್ಡಾಡುತ್ತಿರುವ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

 

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago