News Karnataka Kannada
Wednesday, May 01 2024
ಮೈಸೂರು

ನೀರಿನ ಟ್ಯಾಂಕ್ ಕುಸಿದು ಬಾಲಕ ದುರ್ಮರಣ!

Police
Photo Credit :

ಹುಣಸೂರು: ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಕುಸಿದು ಬಾಲಕನೊಬ್ಬ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಸುದೀಪ್ (೧೪) ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಸಹೋದರ ಪ್ರದೀಪ್‌ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಕಾವೇರಿ ಗಾರ್ಡನ್ ಸಿಟಿ ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಹಠಾತ್ ಕುಸಿಯಿತು. ಟ್ಯಾಂಕ್ ಸಮೀಪ ಆಟವಾಡುತ್ತಿದ್ದ ಸುದೀಪ್ ಸ್ಥಳದಲ್ಲೇ ಸಾವಿಗೀಡಾದ. ಗಾಯಗೊಂಡ ಪ್ರದೀಪ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು