Categories: ಮೈಸೂರು

ಪಠ್ಯದಲ್ಲಿ ಸತ್ಯವಿರಬೇಕು ಐಡಿಯಾಲಜಿಗಳು ಅಲ್ಲ: ಎಸ್.ಎಲ್.ಭೈರಪ್ಪ

ಮೈಸೂರು: ಪಠ್ಯ ಪುಸ್ತಕದಲ್ಲಿ ಪ್ರಾಮಾಣಿಕವಾದದ್ದು ಯಾವುದು? ಪಠ್ಯದಲ್ಲಿ ಸತ್ಯವಿರಬೇಕು. ನಿಮ್ಮ ಐಡಿಯಾಲಜಿಗಳು ಇರಬಾರದು ಎಂದು ಎಸ್.ಎಲ್.ಭೈರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಜಪೇಯಿ ಕಾಲದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದರು. ಆಗ ಸಾಹಿತಿಗಳು ದೇಶದ ತುಂಬೆಲ್ಲ “ಪ್ರಶಸ್ತಿ ವಾಪ್ಸಿ” ಚಳವಳಿ ಶುರು ಮಾಡಿದರು. ಪ್ರಶಸ್ತಿ ಜತೆಗೆ ಹಣವನ್ನೂ ವಾಪಸ್ ಕೊಡಿಯೆಂದು ಸಲಹೆ ಕೊಟ್ಟಿದ್ದೆ. 15 ದಿನಗಳಲ್ಲಿ ಎಲ್ಲರೂ ಸುಮ್ಮನಾಗಿದ್ದರು ಎಂದರು.

ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ನಡೆಯಬೇಕು. ಆದರೆ ಚುನಾವಣೆ ಬಂತೆಂದರೆ ನಾವು ಏನು ಬೇಕಾದರೂ ಮಾಡುತ್ತೇವೆ. ಹೆತ್ತ ತಾಯಿಯ ಜುಟ್ಟು ಹಿಡಿದು ಕೊಟ್ಟು ಬಿಡುತ್ತೇವೆ ಎಂದ ಅವರು ಮಹಾಬಲೇಶ್ವರ ಜಾಗದ ಬಗ್ಗೆ ಮಾತನಾಡಿ, ಮಹಾಬಲೇಶ್ವರದಲ್ಲಿ ಇತಿಹಾಸ ಮರೆ ಮಾಚಲಾಗಿದೆ. ಶಿವಾಜಿ ಕೊಲ್ಲಲು ಬಂದಿದ್ದ ಅಫ್ಜಲ್‌ಖಾನ್ ನನ್ನ ನಾಯಕ ಮಾಡಲಾಗಿದೆ. ನಾನು ಆ ಸ್ಥಳಕ್ಕೆ ಭೇಟಿ ಕೊಟ್ಟಿದ್ದೆ. ಅಲ್ಲಿದ್ದ ಗೈಡ್ ಮೊದಲು ನನಗೆ ಸತ್ಯ ಹೇಳಲಿಲ್ಲ. ಐದು ರೂಪಾಯಿ ಕೊಟ್ಟ ನಂತರ ಘಟನಾ ಸ್ಥಳಕ್ಕೆ ನನ್ನನ್ನು ಕರೆದುಕೊಂಡು ಹೋಗಿದ್ದ. ಅಫ್ಜಲ್ ದಾಳಿ ಬಗ್ಗೆ ಅಲ್ಲಿ ಮೊದಲು ನಾಮ ಫಲಕ ಹಾಕಲಾಗಿತ್ತು. ಸರ್ಕಾರವೇ ನಂತರ ಅದನ್ನ ತೆಗೆದು ಹಾಕಿದೆ. ಇದನ್ನು ಯಾರಿಗೂ ಹೇಳಬೇಡಿ ಎಂದು ಆ ಹುಡುಗ ಕೇಳಿಕೊಂಡ. ಇದೆಲ್ಲವೂ ಚುನಾವಣೆಗಾಗಿ ನಮ್ಮವರು ಮಾಡಿರುವುದು ಎಂದು ಕಿಡಿಕಾರಿದರು.

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕೊಡಗಿನವರು. ಟಿಪ್ಪು ಕೊಡಗು ಜಿಲ್ಲೆಯಲ್ಲಿ ಏನೆಲ್ಲ ಮಾಡಿದನೆಂದು ಕಾರ್ಯಪ್ಪಗೆ ಗೊತ್ತು. ಅದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಇದರಿಂದ ಸಿಟ್ಟಾದ ಮಾಜಿ ನಿರ್ದೇಶಕರು ಸಿಎಂಗೆ ಪತ್ರ ಬರೆದರು, ಚಳವಳಿ ಶುರು ಮಾಡಿದರು. ಸ್ವಲ್ಪದಿನಗಳ ನಂತರ ಎಲ್ಲರೂ ಸುಮ್ಮನಾದರು. ನಾಟಕ ಇರುವುದು ಚಳವಳಿ ಮಾಡಲು. ಕಾವ್ಯ, ಕಾದಂಬರಿ ಹೇಗೆ ರಸಾನುಭವವೋ ಹಾಗೆಯೇ ನಾಟಕ ಕೂಡ ರಸಾನುಭವ. ಅಡ್ಡಂಡ ಕಾರ್ಯಪ್ಪ ತೆಗೆದು ಹಾಕಲು ಚಳವಳಿ ಮಾಡಿದವರಿಗೆ ಸಾಧ್ಯವಾಗಲಿಲ್ಲ. ಟಿಪ್ಪು ವಿಚಾರದಲ್ಲಿ ಲೆಫ್ಟಿಸ್ಟ್, ಮುಸ್ಲಿಂಗಳು ಅವರದ್ದೇ ಐಡಿಯಾಲಜಿ ಮಾಡುತ್ತಾರೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಬೇಕು ಅಂತ ಪ್ರತಾಪ್ ಸಿಂಹ ಹೇಳಿದರು. ಆದರೆ “ಟಿಪ್ಪುವಿನ ನಿಜ ಸ್ವರೂಪ” ಪುಸ್ತಕವನ್ನು ಯಾರೂ ಓದುವುದಿಲ್ಲ ಎಂದು ಎಸ್.ಎಲ್‌.ಭೈರಪ್ಪ ಹೇಳಿದರು.

ಇಂದಿರಾ ಗಾಂಧಿ ಕಾಲದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆಯಾಗಿತ್ತು. ಆಗ ಸತ್ಯವನ್ನ ಹೇಳಬೇಕು ಎಂದಿದ್ದಕ್ಕೆ ನನ್ನನ್ನು ಪರಿಷ್ಕರಣೆ ಸಮಿತಿಯಿಂದ ಹೊರಗಿಟ್ಟಿದ್ದರು. ಆಗಲೂ ಅವರಿಗೆ ಬೇಕಾದವರನ್ನು ಸೇರಿಸಿಕೊಂಡು ಪಠ್ಯ ರಚನೆ ಮಾಡಿದರು. ಅವತ್ತಿನ ಬಹುತೇಕ ಕಾಂಗ್ರೆಸ್ ಸರ್ಕಾರದ ರಾಜ್ಯಗಳು ಪಠ್ಯವನ್ನ ಒಪ್ಪಿಕೊಂಡು ಅಳವಡಿಸಿಕೊಂಡರು ಎಂದು ಅವರು ಹೇಳಿದರು.

ಶಿಕ್ಷಣ ಸಚಿವ ನಾಗೇಶ್ ಮನೆ ಮೇಲೆ ದಾಳಿ ವಿಚಾರವಾಗಿ ಮಾತನಾಡಿದ ಅವರು, ಪೊಲೀಸ್ ಇಲ್ಲದಿದ್ದರೆ ನಾಗೇಶ್ ಮನೆ ಸುಟ್ಟು ಹೋಗುತಿತ್ತು. ಸುಮ್ಮನೆ ಯಾರೋ ಹುಡುಗರು ಇದನ್ನು ಮಾಡುವುದಿಲ್ಲ. ಇದನ್ನು ಯಾರೋ ಮಾಡಿಸುತ್ತಿದ್ದಾರೆ. ಹೀಗಾದರೆ ನಮ್ಮ ದೇಶದಲ್ಲಿ ಐಕ್ಯತೆ ಮೂಡುವುದು ಯಾವಾಗ ಎಂದು ಆತಂಕ ವ್ಯಕ್ತಪಡಿಸಿದರು.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ನನ್ನದು ಯಾವುದೇ ನಿಲುವನ್ನು ಪ್ರಕಟಿಸುತ್ತಿಲ್ಲ. ಆದರೆ ಬಹಳ ವರ್ಷಗಳಿಂದ ಅನೇಕ ಸಂದರ್ಭಗಳಲ್ಲಿ ನಡೆದ ಎಲ್ಲವನ್ನೂ ಹೇಳಿದ್ದೇನೆ ಅಷ್ಟೇ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.

Gayathri SG

Recent Posts

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

10 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

33 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

50 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

55 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

2 hours ago