ಮೈಸೂರು

ಪಠ್ಯದ ವಿಷಯದಲ್ಲಿ ಲೆಫ್ಟು, ರೈಟು ಬೇಡ: ಯದುವೀರ್

ಮೈಸೂರು: ಪಠ್ಯದ ವಿಷಯದಲ್ಲಿ ಲೆಫ್ಟು, ರೈಟು ಎರಡು ಬೇಡ. ಮಕ್ಕಳಿಗೆ ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸುದ್ದಿಗಾರರೊಂದೊದಿಗೆ ಮಾತನಾಡಿ ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸಾಕಷ್ಟು ಚರ್ಚೆಯಾಗುತ್ತಿದ್ದು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದರು.

ಇದೇ ವೇಳೆ ನಗರದ ಸರ್ಕಾರಿ ಆಯುರ್ವೇದ ಕಾಲೇಜಿಗೆ ಭೇಟಿ ನೀಡಿ, ಕಾಲೇಜು ಕಟ್ಟಡದ ನವೀಕರಣದ ಬಗ್ಗೆ ಪರಿಶೀಲನೆ ನಡೆಸಿದ ಮಾತನಾಡಿ, 1930ರಲ್ಲಿ ಮೈಸೂರು ಮಹಾರಾಜರು ಸದರಿ ಕಟ್ಟಡವನ್ನು ನಿರ್ಮಿಸಿದ್ದು, ಸದಸ್ಯ 158 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡದ ನವೀಕರಣ ನಡೆಯುತ್ತಿದೆ. ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು. ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಎಂದು ಹೇಳಲಾಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅನುಮತಿ ನೀಡುತ್ತಿಲ್ಲ. ಆಯುರ್ವೇದಿಕ್ ಆಸ್ಪತ್ರೆ ಕಟ್ಟಡ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾರಕವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದರು.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

4 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

4 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

4 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

5 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

5 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

5 hours ago