Categories: ಮೈಸೂರು

ಪಾದಯಾತ್ರೆ ಮಾಡಿಯೇ ಮಾಡುತ್ತೇವೆ: ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಆಗ್ರಹಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಮಾಡಿಯೇ ತೀರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕೋವಿಡ್ ನೆಪ ಹೇಳಿಕೊಂಡು ಮೇಕೆದಾಟು ಪಾದಯಾತ್ರೆ ತಡೆಗಟ್ಟಲು ಸರ್ಕಾರ ಪ್ರಯತ್ನಿಸುವ ಸಾಧ್ಯತೆ ಇರುವುದರಿಂದ ನಾವು ಸಕಲ ರೀತಿಯ ಕೋವಿಡ್ ಮುನ್ನೆಚ್ಚರಿಕೆ ತೆಗೆದುಕೊಂಡು ಪಾದಯಾತ್ರೆ ಮಾಡುವುದಾಗಿ ಹೇಳಿದರಲ್ಲದೆ, ಅವರು(ಸರ್ಕಾರ) ಏನಾದರೂ ಮಾಡಿಕೊಳ್ಳಲಿ ನಾವಂತು ಪಾದಯಾತ್ರೆ ಮಾಡಿಯೇ ಮಾಡುವುದಾಗಿ ಹೇಳಿದರು.

ಮೇಕೆದಾಟು ಯೋಜನೆ ಹೊಸ ಯೋಜನೆಯೇನಲ್ಲ. ಅದು ಬಹಳ ಹಳೆಯ ಯೋಜನೆ‌ಯಾಗಿರುವುದರಿಂದ ಯೋಜನೆ ಸಂಬಂಧ ನಡೆಸಿದ ಹೋರಾಟವನ್ನು ಕಾಂಗ್ರೆಸ್ ಪಕ್ಷ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿರುವುದಾಗಿ ಹೇಳಿದರು. ಇದೇ ವೇಳೆ ಜೆಡಿಎಸ್ ವಿರುದ್ಧ ಹರಿಹಾಯ್ದ ಅವರು ಈ ವಿಚಾರದಲ್ಲಿ ಜೆಡಿಸ್ ನವರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪಿಸಿದ ಅವರು, 1968 ರಲ್ಲಿ ನಿಜಲಿಂಗಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಕಾಂಗ್ರೆಸ್ ಈ ಯೋಜನೆಯ ಬಗ್ಗೆ ಧ್ವನಿ ಎತ್ತಿತ್ತು. ಆದರೆ ಹಲವಾರು ಕಾರಣಗಳಿಂದ ಯೋಜನೆ ಅನುಷ್ಠಾನಕ್ಕೆ ಬಂದಿರಲಿಲ್ಲ. ಈಗ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಆದರೆ ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ, ಅವರ ಅಧಿಕಾರಾವಧಿಯಲ್ಲಿ ಯೋಜನೆ ಮಾಡಿಲ್ಲ, ಇದು ಗಿಮಿಕ್  ಎಂದು ಹೆಚ್ ಡಿ ಕುಮಾರಸ್ವಾಮಿ ಬಹಳ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ನಾವುಸರ್ಕಾರವನ್ನು ಎಚ್ಚರಿಸುವಂತಹ ಕೆಲಸ ಮಾಡುತ್ತಾ ಬಂದಿದ್ದೇವೆ. ನಮ್ಮ ಎಲ್ಲಾ ಹೋರಾಟಗಳು ಫಲಪ್ರದವಾಗುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಹೀಗಾಗಿ ಸರ್ಕಾರದ ವಿರುದ್ಧ ನಿರಂತರ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಆಡಳಿತ ಪಕ್ಷ ಜನರ ವಿಶ್ವಾಸ ಕಳೆದು ಕೊಂಡಿದೆ. ಹೀಗಾಗಿ ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನೆಲೆಗೆ ಬಂದಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ವಿಳಂಬವಾಗಲು ಬಿಜೆಪಿ ಯವರೇ ಕಾರಣರಾಗಿದ್ದಾರೆ. ನಮ್ಮ ಪಕ್ಷದ ಸರ್ಕಾರದ ಅಧಿಕಾರಾವಧಿಯಲ್ಲಿ ಅನಗತ್ಯವಾಗಿ ಕಾಲಹರಣ ಮಾಡಿದ್ದೇವೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದುದು. ತಮಿಳುನಾಡಿನವರು ರಾಜಕೀಯ ಕಾರಣಕ್ಕಾಗಿ ಖ್ಯಾತೆ ತೆಗೆಯುತ್ತಿದ್ದಾರೆ. ಈಗಿನ ಪರಿಸ್ಥಿಯಲ್ಲಿ ಮೇಕೆದಾಟು ಯೋಜನೆಯನ್ನು ತಡೆಯಲು ತಮಿಳುನಾಡಿನವರಿಗೆ ಸಾಧ್ಯವೇ ಇಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಇದ್ದರು.

Swathi MG

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

22 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

34 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

57 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

2 hours ago