Categories: ಮೈಸೂರು

ಪಿರಿಯಾಪಟ್ಟಣದಲ್ಲಿ ಸಾಲಬಾಧೆಗೆ ರೈತ ಬಲಿ

ಮೈಸೂರು: ರೈತರ ಆತ್ಮಹತ್ಯೆ ಪ್ರಕರಣಗಳು ಮರುಕಳಿಸಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಪ್ರಕರಣಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೂರಗಲ್ಲು ಗ್ರಾಮದಲ್ಲಿ  ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೂರಗಲ್ಲು ಗ್ರಾಮದ ರೈತ ಮಂಜು (40) ಆತ್ಮಹತ್ಯೆ ಮಾಡಿಕೊಂಡವರು.ತಮ್ಮ  ಜಮೀನಿನಲ್ಲಿ ಶುಂಠಿ ಮತ್ತು ಹೊಗೆಸೊಪ್ಪಿನ ವ್ಯವಸಾಯ ಮಾಡುತ್ತಿದ್ದರು. ಕೃಷಿ ಮಾಡುವ ಸಲುವಾಗಿ ಇವರು ಬಾರಸೆ  ಸಹಕಾರ ಬ್ಯಾಂಕಿನಲ್ಲಿ 75 ಸಾವಿರ ಹಾಗೂ ವಿವಿಧ ಸ್ವಸಹಾಯ ಸಂಘಗಳಲ್ಲಿ 2 ಲಕ್ಷ ರೂ ಸಾಲ ಮಾಡಿದ್ದರು, ಕಳೆದ 2 ವರ್ಷಗಳಿಂದ ವ್ಯವಸಾಯದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಸಂಕಷ್ಟ ಅನುಭವಿಸಿದ್ದರು.

ಸಾಲಗಾರರ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮತ್ತು ಸಾಲ ತೀರಿಸಲು ಯಾವುದೇ ಆದಾಯದ ಮೂಲವೂ ಇಲ್ಲದ ಕಾರಣ ತಮ್ಮ ಜಮೀನಿನ ಬಳಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಮನೆಯವರು ಕೂಡಲೇ ಅವರನ್ನು ಚಿಕಿತ್ಸೆಗೆಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ಅಸ್ವಸ್ಥಗೊಂಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

 ಈ ಸಂಬಂಧ ಮೃತ ರೈತನ ಬಾಮೈದ ಮಹದೇವ್ ಎಂಬುವರು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಎಂ ಎತ್ತಿನಮನಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Swathi MG

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

6 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

26 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

56 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago