Categories: ಮೈಸೂರು

ಪಿರಿಯಾಪಟ್ಟಣ ಕನ್ನಂಬಾಡಿಯಮ್ಮ- ಮಸಣೀಕಮ್ಮ  ಬ್ರಹ್ಮರಥೋತ್ಸವ

ಮೈಸೂರು: ಪಿರಿಯಾಪಟ್ಟಣದ ಶಕ್ತಿದೇವತೆಗಳಾದ ಶ್ರೀ ಕನ್ನಂಬಾಡಿಯಮ್ಮನವರ ಬ್ರಹ್ಮರಥೋತ್ಸವ ಮಾ.16ರಂದು ಮತ್ತು ಶ್ರೀ ಮಸಣೀಕಮ್ಮನವರ ಬ್ರಹ್ಮ ರಥೋತ್ಸವ ಮಾ.19 ರಂದು ನಡೆಯಲಿದೆ.

ಜಾತ್ರಾ ಮಹೋತ್ಸವ ಅಂಗವಾಗಿ ಈಗಾಗಲೇ  ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಶಾಸಕ ಕೆ.ಮಹದೇವ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ದೇವಾಲಯದ ಅರ್ಚಕರು ಮತ್ತು ಗ್ರಾಮದ ಮುಖಂಡರ ಪೂರ್ವಭಾವಿ ಸಭೆ ನಡೆದು ಹಿಂದಿನಿಂದ ನಡೆದು ಬಂದ ಧಾರ್ಮಿಕ ಸಂಪ್ರದಾಯದಂತೆ ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿತ್ತು, ಅದರಂತೆ ಎರಡು ದೇವಾಲಯಗಳಲ್ಲಿ ಪೂರ್ವ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಶ್ರೀ ಕನ್ನಂಬಾಡಿಯಮ್ಮ ದೇವಾಲಯ: ಮಾ.9 ರ ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಪಟ್ಟಣದ ಪುರಾತನ ದೇವರ ತೋಟದಿಂದ ಮೂರು ಕಳಸ ತರುವ ಮೂಲಕ ಶ್ರೀ ಕನ್ನಂಬಾಡಿಯಮ್ಮ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಮಾ.15 ರ ಸೋಮವಾರ ಸಂಜೆ ಅಂಕುರಾರ್ಪಣೆ ಪೂಜಾ ಮಹೋತ್ಸವ ಮೂಲಕ ದೇವಾಲಯ ಆವರಣದಲ್ಲಿ ರಥ ಅಲಂಕರಿಸುವ ಕಾರ್ಯ ಜರುಗಿತು, ಮಾ.16 ರ ಮಂಗಳವಾರ ಬೆಳಿಗ್ಗೆ 10.30ಗಂಟೆಯಿಂದ 11.55 ಗಂಟೆ ಒಳಗೆ ಸಲ್ಲುವ ಶುಭ ವೃಷಭ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆದು ಸಂಜೆ ಪೇಟೆ ಬೀದಿಯಲ್ಲಿ ದೇವರ ಮೆರವಣಿಗೆ ನಡೆಯಲಿದೆ, ಮಾ.೧೭ ರ ಬುಧವಾರ ಸಂಜೆ ಅಶ್ವಾರೋಹಣ ಪೂಜೆ ಅಂಗವಾಗಿ ಪಟ್ಟಣದ ಕೋಟೆ ಮತ್ತು ಉಪ್ಪಾರಗೇರಿ ಬೀದಿಗಳಲ್ಲಿ ದೇವರ ಮೆರವಣಿಗೆ ನಡೆಯಲಿದೆ, ಮಾ.18ರ ಸಂಜೆ ದೇವಾಲಯ ಬಳಿಯ ಕಲ್ಯಾಣಿಯಲ್ಲಿ ದೇವರ ತೆಪ್ಪೋತ್ಸವ ನಡೆಯಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕರಾದ ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ, ಪೂರ್ವಸಿದ್ಧತಾ ತಯಾರಿಯಲ್ಲಿ ದೇವಾಲಯ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಪಿ.ಎಸ್ ಸಂಜೀವ್ ಮತ್ತು ಪದಾಧಿಕಾರಿಗಳು ಇದ್ದರು.

ಶ್ರೀ ಮಸಣೀಕಮ್ಮ ಜಾತ್ರೆಗೆ ಮಾ.4 ರ ಗುರುವಾರದಂದು ದೇವರ ತೋಟದ ಕೊಳದಿಂದ 7 ಕಳಸ ಮೆರವಣಿಗೆ ಮಾಡಿ ತರುವ ಮೂಲಕ ಚಾಲನೆ ದೊರೆತಿದೆ, ಮಾ.17 ರಂದು ಶ್ರೀ ಮಸಣೀಕಮ್ಮ ದೇವರ ಅಂಕುರಾರ್ಪಣೆ ಪೂಜೆ ಜರುಗಲಿದೆ, ಮಾ.18 ರ ಗುರುವಾರ ಬೆಳಿಗ್ಗೆ 10.30 ಗಂಟೆಯಿಂದ 11.45 ಗಂಟೆಯವರೆಗೆ ಸಲ್ಲುವ ಶುಭ ವೃಷಭ ಲಗ್ನದಲ್ಲಿ ಬ್ರಹ್ಮರಥೋತ್ಸವ ಜರುಗಲಿದೆ, ಮಾ.19ರ ಶುಕ್ರವಾರ ಕೈತಟ್ಟೆ ಉತ್ಸವ ಅಂಗವಾಗಿ ಸಣ್ಣಯ್ಯನ ಬೀದಿ, ದೊಡ್ಡ ಬೀದಿ ಮತ್ತು ರಾಮಮಂದಿರ ಬೀದಿಗಳಲ್ಲಿ ದೇವರ ಮೆರವಣಿಗೆ ನಡೆಯಲಿದೆ, ಮತ್ತು ಮಾ.20 ರ ಶನಿವಾರ ಸಂಜೆ ದೇವೇಗೌಡನಕೊಪ್ಪಲು, ಉಪ್ಪಾರಗೇರಿ, ಹಮ್ಮಿಗೆ ರಸ್ತೆಯ ಆಂಜನೇಯ ದೇವಾಲಯ ಮೂಲಕ ಮೆರವಣಿಗೆ ಸಾಗಿ ಚಿಕ್ಕಕೆರೆಯಲ್ಲಿ ತೆಪ್ಪೋತ್ಸವ ಜರುಗಲಿದೆ ಎಂದು ದೇವಾಲಯದ ಅರ್ಚಕ ಹರೀಶ್ ಮಾಹಿತಿ ನೀಡಿದ್ದಾರೆ, ಜಾತ್ರಾ ಮಹೋತ್ಸವ ಅಂಗವಾಗಿ ದೇವೇಗೌಡನಕೊಪ್ಪಲು, ಉಪ್ಪಾರಗೇರಿ, ಒಳಕೋಟೆ ಹಾಗೂ ಕರಿಬಸಪ್ಪ ಲೇಔಟ್ ಗ್ರಾಮಗಳ ಮುಖಂಡರು ಮತ್ತು ಗ್ರಾಮಸ್ಥರು ಭರದ ಸಿದ್ಧತೆ ಕೈಗೊಂಡಿದ್ದಾರೆ.

ಬ್ರಹ್ಮರಥೋತ್ಸವ ಅಂಗವಾಗಿ ಎರಡು ದೇವಾಲಯವನ್ನು ಸುಣ್ಣ ಬಣ್ಣ, ತಳಿರು ತೋರಣ, ವಿವಿಧ ಬಗೆಯ ಪುಷ್ಪಾಲಂಕಾರ, ಹಾಗೂ ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸುವ ಕಾರ್ಯ ಭರದಿಂದ ಸಾಗಿದೆ, ದೇವಾಲಯದ ಹೊರ ಆವರಣದಲ್ಲಿ ರಥೋತ್ಸವ ಸಾಗುವ ಸ್ಥಳವನ್ನು ಸ್ವಚ್ಛಗೊಳಿಸಿ ರಥಗಳನ್ನು ಶುದ್ದಿ ಮಾಡುವ ಮೂಲಕ  ಅಲಂಕಾರ ಕಾರ್ಯ ಸಾಗಿದೆ, ಬ್ರಹ್ಮರಥೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ತಂಪು ಪಾನೀಯಗಳನ್ನು ವಿತರಿಸಲು ಪಟ್ಟಣದ ಹಲವು ಸಂಘ ಸಂಸ್ಥೆಗಳು ಸಜ್ಜಾಗಿವೆ, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ, ಬಿ.ಎಂ ರಸ್ತೆಯಲ್ಲಿ ರಥೋತ್ಸವ ಸಂಚರಿಸುವುದರಿಂದ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಆರಕ್ಷಕ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ, ಪಟ್ಟಣದ ಬಿ.ಎಂ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಆಕರ್ಷಣೀಯ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಲಾಗಿದೆ.

ಪಟ್ಟಣದ ಶಕ್ತಿದೇವತೆಗಳ ಬ್ರಹ್ಮರಥೋತ್ಸವ ಕಾರ್ಯ ನಿರ್ವಿಘ್ನವಾಗಿ ನೆರವೇರಲು ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ನೇತೃತ್ವದ ತಾಲ್ಲೂಕು ಆಡಳಿತ ವಿವಿಧ ಇಲಾಖೆ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಂಡು ಸಜ್ಜಾಗಿದೆ.

Swathi MG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago