Categories: ಮೈಸೂರು

ಪೋಷಕರು ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿರುವುದು ವಿಷಾದದ ಸಂಗತಿ

ಮೈಸೂರು: ಪೋಷಕರು ಹಣದ ಬೆನ್ನು ಹತ್ತಿರುವುದರಿಂದ, ತಮ್ಮ ಮಕ್ಕಳನ್ನು ದುಡಿಮೆಗೆ ಹಚ್ಚಿದ್ದಾರೆ ಎಂದು ವರಕೋಡು ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು.

ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕ್ಲಸ್ಟರ್ ಮಟ್ಟದ ಎಸ್.ಡಿ.ಎಂ.ಸಿ. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದ ಆಕರ್ಷಣೆಗೆ ಒಳಗಾಗಿರುವ ಮಕ್ಕಳಿಗೂ ಕಲಿಯುವುದಕ್ಕಿಂತ ಸಂಪಾದನೆಯ ಕಡೆಗೆ ಆಸಕ್ತಿ.

ಇದರಿಂದ ಮಕ್ಕಳು ಶಾಲೆಗೆ ಗೈರು ಹಾಜರಾಗುವುದು ಹೆಚ್ಚಾಗುತ್ತಿದೆ. ಇದು ಬಾಲಕಾರ್ಮಿಕ  ಪದ್ಧತಿಯ ಉಳಿವಿಗೂ ಕಾರಣವಾಗುತ್ತದೆ ಆದ್ದರಿಂದ ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಶಾಲೆಗೆ ತಪ್ಪದೇ ಕಳುಹಿಸಬೇಕು. ಮಕ್ಕಳ ಹಾಜರಾತಿ ಮತ್ತು ಕಲಿಕೆಗೆ ಅವಕಾಶ ನೀಡುವ ಮೂಲಕ ಅವರ ಭವಿಷ್ಯವನ್ನು ಉತ್ತಮಗೊಳಿಸಲು ಸಹಕರಿಸಬೇಕು ಎಂದರು.

ಇಡೀ ಭಾರತ ವಿದ್ಯಾವಂತರ ದೇಶವಾಗಬೇಕು ಎಂದು ಸರ್ಕಾರ ಪ್ರತಿ ಶೈಕ್ಷಣಿಕ ವರ್ಷದಲ್ಲಿ ಪ್ರತಿಮಗುವಿಗೂ ತಲಾ 50 ಸಾವಿರ ರೂಪಾಯಿಗಳ ವೆಚ್ಚ ಮಾಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಸುರಕ್ಷತೆಯ ವಾತಾವರಣ ಇದೆ. ಇದನ್ನು ಮನಗಂಡು ಪೋಷಕರು ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಮಕ್ಕಳ ಕಲಿಕಾ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ದೀಪು ಅವರು ಮಾತಾನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದಿಂದ ಸಂಪನ್ಮೂಲಗಳ ಕ್ರೋಢೀಕರಿಸುವ ಮತ್ತು ಸಮರ್ಪಕವಾಗಿ ಬಳಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಶಾಲೆಯ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲು ಶಿಬಿರದಲ್ಲಿ ಅವಕಾಶ ಇದ್ದು, ಎಲ್ಲರೂ ಸದ್ಬಳಕೆ ಮಾಡಿಕೊಂಡು ಶಾಲೆಗಳ ಪ್ರಗತಿಗೆ ಕೈಜೋಡಿಸಬೇಕೆಂದರು.

ವೇದಿಕೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ. ಸತೀಶ್ ಜವರೇಗೌಡ, ಮೆಲ್ಲಹಳ್ಳಿಯ ಶಾಲೆಯ ಎಸ್‌ಡಿ.ಎಂ.ಸಿ. ಅಧ್ಯಕ್ಷ ಈಶ್ವರ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎನ್. ಅನುಪಮ, ವರಕೋಡು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರ್. ನರಸಿಂಹಮೂರ್ತಿ, ಟಿಜಿಟಿ ಶಿಕ್ಷಕ ಸುನೀಲ್ ಕುಮಾರ್ ಉಪಸ್ಥಿತರಿದ್ದರು. ಮೆಲ್ಲಹಳ್ಳಿಯ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು‌.

Sneha Gowda

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

40 seconds ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

23 mins ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

39 mins ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

1 hour ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

1 hour ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

2 hours ago