Categories: ಮೈಸೂರು

ಪ್ರಯಾಣಿಕರಿಗೆ ನರಕವಾದ ಸರಗೂರು ಬಸ್‍ ನಿಲ್ದಾಣ

ಮೈಸೂರು: ತಾಲೂಕು ಕೇಂದ್ರವಾಗಿರುವ ಸರಗೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದರೂ ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಮಾಡದ ಕಾರಣ ನೀರು ಹರಿಯದೆ ಕೆರೆಯಂತೆ ನಿಲ್ಲುತ್ತಿರುವುದರಿಂದ ಇದೀಗ ಪ್ರಯಾಣಿಕರು ಪರದಾಡುವಂತಾಗಿದೆ.

ಪ್ರತಿ ಸಲ ಮಳೆ ಬಂದಾಗಲೂ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗುತ್ತಿದ್ದು, ನೀರನ್ನು ಹೊರಗೆ ಹಾಕುವುದೇ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಮೇಲ್ನೋಟಕ್ಕೆ ಬಸ್ ನಿಲ್ದಾಣದ ಕಟ್ಟಡವು  ಉತ್ತಮವಾಗಿದ್ದು, ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಕಾರಣ ಮಳೆ ಬಂದಾಗ ಸಂಗ್ರಹವಾಗುವ  ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಬಸ್ ನಿಲ್ದಾಣದೊಳಗೆ ನೀರು ತುಂಬಿಕೊಂಡು  ಅಸಹ್ಯ ಮೂಡಿಸುತ್ತಿದೆ. ಅಷ್ಟೇ ಅಲ್ಲದೆ ಪ್ರಯಾಣಿಕರು ಒಳಗೆ ಕೂರಲಾಗದ ಪರಿಸ್ಥಿತಿ ನಿರ್ಮಾಣವಾಗಿ ಬಿಡುತ್ತದೆ.

ಮಳೆ ಸುರಿದಾಗ ಕೊಳಚೆ ನೀರೆಲ್ಲ ಒಂದೆಡೆ ಸಂಗ್ರಹವಾಗಿ ಹೊರಹೋಗದೆ ಅಲ್ಲಿಯೇ ನಿಲ್ಲುವುದರಿಂದ ದುರ್ವಾಸನೆ ಬೀರುತ್ತಿದ್ದು, ಪ್ರಯಾಣಿಕರು ಮೂಗು ಮುಚ್ಚಿಕೊಂಡು ಬಸ್ ಗೆ ಕಾಯಬೇಕಾಗಿದೆ. ಜತೆಗೆ ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಭಯವೂ ಪ್ರಯಾಣಿಕರಲ್ಲಿ ಹುಟ್ಟಿಕೊಂಡಿದೆ.

ಈಗಾಗಲೇ ಕಳೆದ ಒಂದು ವಾರದ ಹಿಂದೆ ಸುರಿದ ಮಳೆ ನೀರು ಹಾಗೆಯೇ ನಿಂತಿದ್ದು, ದುರ್ವಾಸನೆ ಬೀರುತ್ತಿದ್ದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೂಗು ಮುಚ್ಚಿ ಎಷ್ಟು ಹೊತ್ತು ಕುಳಿತುಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ನೀರು ಹೊರಗೆ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಸಂಬಂಧಿಸಿದವರಲ್ಲಿ ಮನವಿ ಮಾಡಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಇನ್ನಾದರೂ ಕ್ರಮ ಕೈಗೊಂಡು ಪ್ರಯಾಣಿಕರು ನೆಮ್ಮದಿಯಾಗಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡುತ್ತಾರಾ ಎಂಬುದನ್ನು ಕಾದುನೋಡಬೇಕಾಗಿದೆ.

Sneha Gowda

Recent Posts

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

10 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

28 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

38 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago