Categories: ಮೈಸೂರು

ಪ್ರಾಣಿ ಪಕ್ಷಿ ಸಂಕುಲಗಳ ಉಳಿವಿಗೆ ಮುಂದಾಗಿ: ಮಂಜಮ್ಮ ಜೋಗತಿ

ಮೈಸೂರು: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕು ಎಂದು ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಮನವಿ ಮಾಡಿದ್ದಾರೆ.

ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್  ಎರಡು ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು ಮೈಸೂರು ನಗರದಲ್ಲಿ ಹಮ್ಮಿಕೊಂಡಿದ್ದು ಇದಕ್ಕೆ ಬೆಂಗಳೂರಿನ  ರವೀಂದ್ರ ಕಲಾಕ್ಷೇತ್ರದ ಕನ್ನಡಭವನದಲ್ಲಿ ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿಸಂಕುಲ ಬಳಲುತ್ತವೆ. ಕುಡಿಯುವ ನೀರು ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ಪರಿಸರ ರಕ್ಷತಿ ರಕ್ಷಿತಃ  ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್  ಎರಡು ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ  ರೂಪಿಸುತ್ತಿರುವುದು ಅತ್ಯುತ್ತಮವಾದ ಕೆಲಸ,  ಬೇಸಿಗೆಯ ದಿನ ಇನ್ನೇನು  ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ  ನಡೆಸುವ ಹಾದಿಯಲ್ಲಿರುತ್ತವೆ.

ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಾಗೂ ಅಗತ್ಯ ನಾಗರಿಕ ಸವಲತ್ತುಗಳ ನೆರಳಿನಡಿಯಲ್ಲಿ ಈಗಾಗಲೇ ಹಲವಾರು ಪಕ್ಷಿಗಳು ನಶಿಸಿ ಹೋಗುತ್ತಿವೆ. ಅಳಿದು ಉಳಿದಿವೆಯೇನೋ ಎಂಬಂತಿರುವ ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲಕ್ಕಿಂದು ತಿನ್ನಲು ಆಹಾರ ಮತ್ತು ಕುಡಿಯಲು ನೀರಿಗಾಗಿ ಪರಿತಪಿಸುವ ಕಾಲ ಇದಾಗಿದ್ದು, ಈ ಭೂಮಂಡಲದಲ್ಲಿ ಸರ್ವಜೀವಿಗಳಿಗೂ ಸಮಬಾಳು ಸ್ವತಂತ್ರ್ಯತೆ ಇರಬೇಕು  ಮಾನವೀಯ ದೃಷ್ಟಿಯಿಂದ ಅವುಗಳ ಬಗ್ಗೆ ಕಾಳಜಿವಹಿಸಬೇಕೆಂದು ಅವರು ಕಳಕಳಿ ವ್ಯಕ್ತಪಡಿಸಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಮಾತನಾಡಿ ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಸಹ  ಮೈಸೂರು ನಗರದ ಪ್ರತಿಯೊಂದು ವಾರ್ಡ್‌ ನಲ್ಲಿ ಕಾಣಸಿಗುವ ಪ್ರಾಣಿ ಮತ್ತು ಪಕ್ಷಿಗಳಿಗೆ  ನೀರಿನ ತೊಟ್ಟಿ ಹಾಗೂ ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನೆಡಲಾಗುವುದು ಹಾಗೆಯೇ ಸುತ್ತಮುತ್ತ ಇರುವವರಿಗೆ ಪ್ರತಿನಿತ್ಯ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು  ಎಂದು ಹೇಳಿದರು.

ಈ ಸಂದರ್ಭ ಕೆಎಂಪಿಕೆ ಟ್ರಸ್ಟ್  ಪ್ರಧಾನ ಕಾರ್ಯದರ್ಶಿ ಅಜಯ್ ಶಾಸ್ತ್ರಿ , ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ರೇಖಾ ಶ್ರೀನಿವಾಸ್, ಮಂಜುನಾಥ್, ರುದ್ರಾಕ್ಷಿ ಬಾಯಿ, ರೂಪ ಹೆಚ್ ಗೌಡ, ಕವಿತಾ ಮಠದ್, ಹೇಮಲತಾ, ರೇಣುಖ, ಜಾನಪದ  ಅಕಾಡೆಮಿ ಸದಸ್ಯರಾದ  ಶ್ರೀವತ್ಸ, ಜಿ. ಆರ್ ನಾರಾಯಣಪ್ಪ ಮಡ ಸಿರಿವಾರ , ರುದ್ರಾಕ್ಷಿ ಬಾಯ್ ,  ಕುಡಿಯರ ಬೋಜಕ್ಕಿ , ಹಾಗೂ ಇನ್ನಿತರರು ಇದ್ದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

5 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

5 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

6 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

6 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

6 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

6 hours ago