Categories: ಮೈಸೂರು

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ:ಬಿಎಸ್‍ ವೈ

ಮೈಸೂರು: ಮುಂದಿನ 2023ರ ವಿಧಾನಸಭಾ ಚುನಾವಣೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ನೇತೃ‍ತ್ವದಲ್ಲಿಯೇ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಕಾಂಗ್ರೆಸ್ ನವರು ಏನೇ ಹೇಳಿದರೂ ರಾಜ್ಯದಲ್ಲಿ ಬಿಜೆಪಿ ಪರವಾದಂತಹ ಅಲೆಯಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ 140ಕ್ಕೂ ಹೆಚ್ಚು  ಕ್ಷೇತ್ರ ಗಳನ್ನು  ಗೆದ್ದು ನಾವು ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

ಏಪ್ರಿಲ್ 1 ರಿಂದ ಬಿಜೆಪಿ ನಾಯಕರು ಮೂರರಿಂದ ನಾಲ್ಕು ತಂಡಗಳಾಗಿ ಮಾಡಿಕೊಂಡು ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆ ಮಾಡುವುದಾಗಿ ಹೇಳಿದ ಅವರು, ರಾಜ್ಯದಲ್ಲಿನ ವಾತಾವರಣ ಬಿಜೆಪಿ ತುಂಬಾ ಅನುಕೂಲಕರವಾಗಿದೆ. ನಾವು ಮಾಡಿರುವ ಒಳ್ಳೆಯ ಕಾರ್ಯಗಳನ್ನು ಜನರಿಗೆ ಮನೆಮನೆಗೆ ತಲುಪಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಲಿದ್ದಾರೆ ಎಂದರು.

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಆಗಲಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ  ಉತ್ತರಿಸಿದ ಅವರು, ನೂರಕ್ಕೆ ನೂರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಿಂದುಳಿದ ವರ್ಗದವರನ್ನು ನಮ್ಮ ಜೊತೆ ತೆಗೆದುಕೊಳ್ಳುವ ಪ್ರಯತ್ನ ಆಗಬೇಕಿದೆ. ಈಗಾಗಲೇ ಅವರೆಲ್ಲರೂ ನಮ್ಮ ಜೊತೆ ಇದ್ದಾರೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡು ಬರುವುದರ ಮೂಲಕ ಮಹಿಳಾ ಸಬಲೀಕರಣ ಮೂಲಕ ಸಂಘಟನೆಯನ್ನು ಬಲಪಡಿಸುವಂತಹ ಪ್ರಯತ್ನವನ್ನು ಮಾಡುತ್ತಿದ್ದೇವೆ. ನೂರಕ್ಕೆ ನೂರು ಅದರಲ್ಲಿ ಯಶಸ್ವಿಯಾಗುತ್ತೇವೆ. ಬರುವಂತಹ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಭಾರತೀಯ ಜನತಾ ಪಕ್ಷ ಕರ್ನಾಟಕ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದರು. ಅವಧಿಗೂ ಮುನ್ನ ಚುನಾವಣೆ ನಡೆಯಲಿದೆಯಾ ಎಂಬ ಪ್ರಶ್ನೆಗೆ ಈಗಿನ ಸ್ಥಿತಿಯಲ್ಲಿ ಅಂತಹ ವಾತಾವರಣ ಇಲ್ಲ. ಅದೆಲ್ಲವೂ ಊಹಾಪೋಹದ ಮಾತು ಎಂದು ಹೇಳಿದರು.

ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಮಠದ ವತಿಯಿಂದ  ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಯಿತು.  ನಂತರ ಯಡಿಯೂರಪ್ಪನವರು  ಶಿವರಾತ್ರೀ ದೇಶೀಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದು ಅವರ ಜೊತೆ ಉಭಯಕುಶಲೋಪರಿ ನಡೆಸಿದರು.

Swathi MG

Recent Posts

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

5 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

8 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

23 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

29 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

55 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

57 mins ago