News Karnataka Kannada
Tuesday, May 07 2024
ಮೈಸೂರು

ಬಸ್-ಕ್ಯಾಂಟರ್ ಮುಖಾಮುಖಿ: 35 ಮಂದಿಗೆ ಗಂಭೀರ ಗಾಯ

Accident
Photo Credit : News Kannada

ಕೆ.ಆರ್.ನಗರ: ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಹಾಗೂ ನಿರ್ವಾಹಕ ಕ್ಯಾಂಟರ್‌ನ ಚಾಲಕ ಸೇರಿದಂತೆ 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಹೊಸ ಅಗ್ರಹಾರ ರೈಲ್ವೇ ನಿಲ್ದಾಣದ ಬಳಿ ಮೈಸೂರು-ಹಾಸನ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಾಳುಗಳಿಗೆ ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವವರನ್ನು ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಮೈಸೂರಿನಿಂದ ಸಾರಿಗೆ ಸಂಸ್ಥೆಯ ಬಸ್ ಹಾಸನಕ್ಕೆ ತೆರಳುತ್ತಿತ್ತು ಹಾಸನ ಕಡೆಯಿಂದ ಗೂಡ್ಸ್ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಎಡಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎದುರು ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಾಲಿಗ್ರಾಮ ಸಿಪಿಐ ಶ್ರೀಕಾಂತ್ ಮತ್ತು ಸಿಬ್ಬಂದಿ ಭೇಟಿ ಕೊಟ್ಟು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದಲ್ಲದೆ ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು