ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ ಒಲಿದುಬಂದಿದೆ. ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಅವರಿಗೆ ಮೇಯರ್ ಪಟ್ಟ ಲಭಿಸಿದೆ. ಇವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಂಬಂಧಿಯೂ ಹೌದು. ಒಟ್ಟು 72 ಮತಗಳಲ್ಲಿ ಸುನಂದಾ ಪಾಲನೇತ್ರ 25 ಮತ, ಕಾಂಗ್ರೆಸ್ನ ಹೆಚ್.ಎಂ. ಶಾಂತಕುಮಾರಿ 20. ಜೆಡಿಎಸ್ ಪಕ್ಷದ ಅಶ್ವಿನಿ ಆರ್. ಅನಂತು 21 ಮತಗಳು ಹಾಗೂ ಇತರೆ 6 ಮತ ಪಡೆದುಕೊಂಡಿದ್ದಾರೆ.
ಈ ಹಿನ್ನೆಲೆ ಟ್ವೀಟ್ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಮೊದಲ ಬಾರಿಗೆ ಬಿಜೆಪಿ ಪಡೆದುಕೊಂಡಿದ್ದು, ಇದು ಪಕ್ಷದ ಬೇರುಗಳು ವಿಸ್ತಾರಗೊಳ್ಳುತ್ತಿರುವ ಪ್ರಬಲ ಸಂಕೇತವಾಗಿದೆ. ಮೈಸೂರಿನ ಮೇಯರ್ ಆಗಿ ಆಯ್ಕೆಯಾಗಿರುವ ಪಕ್ಷಸ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದಿದ್ದಾರೆ.
ಬಿಎಸ್ವೈ ಸಂಬಂಧಿ ಈಗ ಮೈಸೂರು ಮೇಯರ್; ಬೇರುಗಳು ವಿಸ್ತಾರಗೊಳ್ಳುತ್ತಿವೆ ಎಂದ ಮಾಜಿ ಸಿಎಂ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.