ಮೈಸೂರು

ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಹೋರಾಟ ಮುಂದುವರಿಕೆ ; ಸಾ ರಾ ಮಹೇಶ್‌

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ‌ ಸಿಂಧೂರಿ ವಿರುದ್ಧ ಮುಂಬರುವ ಅಧಿವೇಶನದಲ್ಲಿ ಹೋರಾಟ ಮಾಡುವುದಾಗಿ ಶಾಸಕ ಸಾ.ರಾ. ಮಹೇಶ್ ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಅವರನ್ನು ಅಮಾನತು ಮಾಡುವ ಆಗ್ರಹ ನನ್ನದಾಗಿತ್ತು. ಸರ್ಕಾರ ಕೇವಲ ವರ್ಗಾವಣೆ ಮಾತ್ರ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು.ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ನಡೆಸಿದ ಸಾ.ರಾ.ಮಹೇಶ್ಇಂತಹ ಅಧಿಕಾರಿ ಮೈಸೂರಿಗೆ ಬೇಡ ಅಂತಾ ಆರಂಭದಲ್ಲೇ ಹೇಳಿದ್ದೆ. ಆಗ ಸಚಿವರು, ಸಂಸದ ಹಾಗೂ ಶಾಸಕರು ಅವರ ಪರ ನಿಂತಿದ್ದರು. ಜಿಲ್ಲಾಡಳಿತಕ್ಕೆ ಅವರಿಂದ ಕೆಟ್ಟ ಹೆಸರು ಬರುತ್ತಿದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಂಡರು ಎಂದರು.ಪಾರಂಪರಿಕ ಕಟ್ಟಡ ವ್ಯಾಪ್ತಿಯಲ್ಲಿ ಈಜುಕೊಳ, ಕಟ್ಟಡ ನವೀಕರಣ, ಮುಡಾದಿಂದ ವಕೀಲರೊಬ್ಬರಿಗೆ ನೀಡಿರುವ‌ ದೊಡ್ಡ ಮೊತ್ತವನ್ನು ರೋಹಿಣಿ‌ ಸಿಂಧೂರಿ ಅವರಿಂದಲೇ ಭರಿಸಬೇಕು. ಈ ಕುರಿತು ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿ ಸಾ. ರಾ. ಮಹೇಶ್​ ಹೇಳಿದರು.

Indresh KC

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

3 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

19 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

47 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

54 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

56 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago