Categories: ಮೈಸೂರು

ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ; ಡಾ.ಕೆ. ಸುಧಾಕರ್

ಮೈಸೂರು, ಏ. 22 ; “ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ. ಆದರೂ ಸಭೆ ಸಮಾರಂಭ ಸೇರಿದಂತೆ ಒಳಾಂಗಣ ಕಾರ್ಯಕ್ರಮಗಳಿರುವಲ್ಲಿ ಎಂದಿನಂತೆ ಮಾಸ್ಕ್ ಧರಿಸಬೇಕು” ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಸಚಿವರು, “ದೇಶದಲ್ಲಿ ಕೊರೊನಾ ಹೆಚ್ಚುತ್ತಿದೆ. ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸಬೇಕು ಎಂದರು. ನಮ್ಮ ರಾಜ್ಯದಲ್ಲಿ ಕೊರೊನಾ ಇಲ್ಲ. ದೂರದ ದೆಹಲಿಯಲ್ಲಿ ಮಾತ್ರ ಇದೆ ಎಂದು ನಿರ್ಲಕ್ಷ್ಯವಹಿಸದೇ ಕೊರೊನಾ ನಿಯಮಾವಳಿ ಪಾಲಿಸಬೇಕೆಂದು” ಕರೆ ನೀಡಿದರು.

“ದೆಹಲಿ ಸೇರಿದಂತೆ, ಉತ್ತರ ಭಾರತದ ರಾಜ್ಯಗಳಲ್ಲಿ ಕೊರೊನಾ ಗಣನೀಯವಾಗಿ ಹೆಚ್ಚಾಗುತ್ತಿದೆ. ಹೀಗಿದ್ದರೂ ದೂರದ ಬೇರೆ ದೇಶಗಳಲ್ಲೂ ಕೊರೊನಾ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಲ್ಲ. ಮಾತ್ರವಲ್ಲದೇ ಇನ್ನಿತರ ಕೋವಿಡ್ ನಿಯಮಗಳನ್ನು ಪಾಲಿಸಲು ಈಗಿನಿಂದಲೇ ಆರಂಭಿಸಬೇಕು” ಎಂದರು.

“ದೇಶದಲ್ಲಿ 185 ಕೋಟಿ ಹಾಗೂ ರಾಜ್ಯದಲ್ಲಿ 10.6 ಕೋಟಿ ಜನಕ್ಕೆ ಲಸಿಕೆ ಹಾಕಿಸಿದ್ದರಿಂದ ದೇಶದಾದ್ಯಂತ ಕೋವಿಡ್ 3ನೇ ಅಲೆ ಹೆಚ್ಚು ಪರಿಣಾಮಕಾರಿಯಾಗಿಲ್ಲ. ಹೀಗಾಗಿ 4ನೇ ಅಲೆಯಿಂದ ತಪ್ಪಿಸಿಕೊಳ್ಳಬೇಕಾದರೆ ನಿರ್ಲಕ್ಷ್ಯ ವಹಿಸದೇ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು” ಎಂದು ಸಚಿವರು ಮನವಿ ಮಾಡಿದರು.

“12 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಕೇಂದ್ರ ಸರ್ಕಾರ 5 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳುತ್ತಿದೆ ಎಂಬ ಮಾಹಿತಿ ಇದೆ” ಎಂದು ಸಚಿವ ಸುಧಾಕರ್ ತಿಳಿಸಿದರು.

Gayathri SG

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

21 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

47 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago