Categories: ಮೈಸೂರು

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲ್ಲ: ಸಿದ್ದರಾಮಯ್ಯ

ಮದ್ದೂರು : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.

ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ತಮ್ಮ ಸಹಪಾಠಿ ಪುಟ್ಟಿನಕೆರೆ ಸತ್ಯನಾರಾಯಣಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲಘಿ. ಅಂದಿನ ರಾಜಕೀಯ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇನೆಯೇ ಹೊರತು, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅವಧಿಗೆ ಮುನ್ನ ವಿಧಾನ ಸಭಾ ಚುನಾವಣೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲಘಿ. 2023ರ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುತ್ತದೆ. ಅವಧಿ ಮುನ್ನ ಚುನಾವಣೆ ಕೇವಲ ಊಹಾಪೋಹ ಎಂದು ಹೇಳಿದರು.

Sneha Gowda

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

22 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

42 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago