News Karnataka Kannada
Wednesday, May 08 2024
ಮೈಸೂರು

ಮುಂದಿನ ವರ್ಷದಿಂದ ಕನ್ನಡದಲ್ಲೂ ಕಾನೂನು ಪದವಿ ಪರೀಕ್ಷೆ ಬರೆಯಲು ಅವಕಾಶ : ಮೈಸೂರು

Mysore Vv (1)
Photo Credit :

ಮೈಸೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಕಾನೂನು ಪದವಿ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಮೈಸೂರು ವಿವಿಯ ಶಿಕ್ಷಣ ಮಂಡಳಿ ತೆಗೆದುಕೊಂಡಿದೆ.

ಗುರುವಾರ ಮೈಸೂರಿನ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಮೈಸೂರು ವಿವಿಯ ಶಿಕ್ಷಣ ಮಂಡಳಿ ಮೂರನೇ ಸಾಮಾನ್ಯ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಕಾನೂನು ಪದವಿ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಕ್ರಮವಹಿಸಲಾಗುವುದು ಎಂದು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಸರಕಾರ ನಾಮನಿರ್ದೇಶನ ಸದಸ್ಯ ವಕೀಲ ರಾಜಶೇಖರ್, ಲಾ ಓದುವ ಮಕ್ಕಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಲ್ಲ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಎಂಜಿನಿಯಿರಿoಗ್, ಮೆಡಿಕಲ್ ಪರೀಕ್ಷೆಗಳನ್ನೇ ಕನ್ನಡದಲ್ಲಿ ಬರೆಯಲು ಅವಕಾಶ ನೀಡುತ್ತಿರುವಾಗ ಕಾನೂನು ವಿಷಯಕ್ಕೆ ಮಾತ್ರ ಇಂಗ್ಲಿಷ್ ಮಾಧ್ಯಮವೇಕೆ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ವಿವಿಯ ಕಾನೂನು ನಿಕಾಯದ ಡೀನ್ ಪ್ರೊ.ರಮೇಶ್, ವಿವಿಯಲ್ಲಿ 1973ರಿಂದ ಕಾನೂನು ವಿಭಾಗ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿಯವರೆಗೆ ಸ್ನಾತಕೋತ್ತರದಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ, ಪದವಿಯಲ್ಲಿ 2006ರವರೆಗೆ ವಿದ್ಯಾರ್ಥಿಗಳು ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಪರೀಕ್ಷೆ ಬರೆಯುತ್ತಿದ್ದರು. ಆದರೆ, ನಂತರ ಬದಲಾದ ನಿಯಾಮಾವಳಿಂದ ಕಾನೂನು ಪದವಿ ಇಂಗ್ಲಿಷ್ ಮಾಧ್ಯಮವಾಗಿ ಪರಿವರ್ತನೆ ಆಯಿತು. ಕನ್ನಡದಲ್ಲಿ ಪರೀಕ್ಷೆ ಬರೆಯಲು ಗುಣಮಟ್ಟದ ಪುಸ್ತಕಗಳಿಲ್ಲ. ಉತ್ತಮ ಅನುವಾದವೂ ಆಗಿಲ್ಲ. ಹೀಗಾಗಿ ಇಂಗ್ಲಿಷ್ ಮಾಧ್ಯಮಕ್ಕೆ ಆದ್ಯತೆ ನೀಡಲಾಗಿದೆ. ಸರಕಾರವೇ ಉತ್ತಮ ಅನುವಾದಕರಿಂದ ಕನ್ನಡಕ್ಕೆ ಪುಸ್ತಕ ಅನುವಾದ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜಶೇಖರ್, ಇಂಗ್ಲಿಷ್‌ನಲ್ಲೇ ನ್ಯಾಯಾಧೀಶರ ಜಡ್ಜಮೆಂಟ್ ಕಾಪಿಗಳು ಬರುತ್ತಿರುವಾಗ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಬರೆಯುವ ಹಕ್ಕನ್ನು ಮೊಟುಕೊಳಿಸಬೇಡಿ ಎಂದು ಮನವಿ ಮಾಡಿದರು. ಇದಕ್ಕೆ ಸಭೆಯಲ್ಲಿ ಇತರ ಪ್ರಾಧ್ಯಾಪಕರು ಬೆಂಬಲ ವ್ಯಕ್ತಪಡಿಸಿದರು.

ಈ ಬಗ್ಗೆ ಮಾತನಾಡಿದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಬೆಂಗಳೂರು ಕಾನೂನು ವಿವಿಯಲ್ಲಿ ಪಠ್ಯಕ್ರಮ ಹೇಗಿದೆ? ಯಾವ ಭಾಷೆಗೆ ಆದ್ಯತೆ ಕೊಟ್ಟಿದ್ದಾರೆ ಎಂದು ಪರಿಶೀಲಿಸಲಾಗುವುದು. ಜೊತೆಗೆ ಮುಂದಿನ ಬಾರಿಯಿಂದ ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿದರು.

ಸಭೆಯಲ್ಲಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರೊ.ಎ.ಪಿ.ಜ್ಞಾನಪ್ರಕಾಶ್ (ಪರೀಕ್ಷಾಂಗ ಕುಲಸಚಿವ), ಹಣಕಾಸು ಅಧಿಕಾರಿ ಡಾ.ಸಂಗೀತಾ ಗಜಾನನ ಭಟ್, ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಪ್ರೊ.ನೀಲಮ್ಮ ಬೆಟಸೂರ್, ಪ್ರೊ.ಬಸವರಾಜು ಸೇರಿದಂತೆ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು