ಬೆಂಗಳೂರು ; ಇಲ್ಲಿನ ಆರ್.ಟಿ. ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಚಿವರಾದ ಎಸ್ ಎ ರಾಮದಾಸ್ ಮತ್ತು ಸಿ ಪಿ ಯೋಗೇಶ್ವರ್ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ, ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಶಾಸಕ ಎಸ್.ಎ.ರಾಮದಾಸ್ ಮುಚ್ಚಿದ ಲಕೋಟೆ ಕೊಟ್ಟು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮದಾಸ್ ಅವರು, ಮುಚ್ಚಿದ ಲಕೋಟೆಯಲ್ಲಿ ನನ್ನ ಕೆಲಸದ ಅನುಭವಗಳ ಪಟ್ಟಿ ಇದೆ. ಸಮಯ ಇರುವಾಗ ಓದಿ ಎಂದು ಸಿಎಂಗೆ ಹೇಳಿದ್ದೇನೆ. ರಾಜ್ಯ ಹಾಗೂ ಪಕ್ಷದ ಹಿತದೃಷ್ಟಿಯಿಂದ ಕೆಲವು ವಿಚಾರ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ನಾನು ಇವತ್ತು ಸಿಎಂ ಭೇಟಿ ಮಾಡಿದ್ದೇನೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮೈಸೂರಿಗೆ ಬಂದಿದ್ದಾಗ ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಯಾಕೆ ಭೇಟಿ ಮಾಡಿಲ್ಲ ಎಂಬುದಕ್ಕೆ ಪತ್ರದ ಮೂಲಕ ಕಾರಣ ಕೊಡುತ್ತೇನೆ ಎಂದಿದ್ದೆ. ಅದರಂತೆ ಇವತ್ತು ಸಿಎಂ ಭೇಟಿ ಮಾಡಿ ಸೀಲ್ಡ್ ಕವರ್ ಕೊಟ್ಟಿದ್ದೇನೆ ಎಂದು ರಾಮದಾಸ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಲಕೋಟೆ ನೀಡಿದ ಶಾಸಕ ಎಸ್.ಎ.ರಾಮದಾಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.