Categories: ಮೈಸೂರು

ಮೃಗಾಲಯ-ಕಾರಂಜಿ ಕೆರೆ ಕಾಂಬೋ ಟಿಕೆಟ್ ದರ ಏರಿಕೆ

ಮೈಸೂರು: ಚಾಮರಾಜ ಮೃಗಾಲಯದ ನಿರ್ವಹಣೆ ದೃಷ್ಟಿಯಿಂದ ಟಿಕೆಟ್ ದರದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಮೃಗಾಲಯ ವ್ಯಾಪ್ತಿಯಲ್ಲಿರುವ ಕಾರಂಜಿ ಕೆರೆಯ ಟಿಕೆಟ್ ದರವನ್ನು 5 ರಿಂದ 10 ರೂ. ಹೆಚ್ಚಿಸಲಾಗಿದ್ದು, ಜತೆಗೆ ಮೃಗಾಲಯ ಮತ್ತು ಕಾರಂಜಿ ಕೆರೆಯ ಕಾಂಬೋ ಆಫರ್ ಟಿಕೆಟ್‌ನ ದರದಲ್ಲಿಯೂ ಸಹ ಏರಿಕೆ ಮಾಡಲಾಗಿದೆ.

ಮೈಸೂರಿನ ಕೂರ್ಗಳ್ಳಿ ಯಲ್ಲಿರುವ ಮೃಗಾಲಯ ಪ್ರಾಧಿಕಾರದ ಆಡಳಿತ ಕಚೇರಿ ಆವರಣದಲ್ಲಿ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹಾದೇವ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರದ 150ನೇ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕಾರಂಜಿ ಕೆರೆಯ ಟಿಕೆಟ್ ದರವನ್ನು ವಯಸ್ಕರಿಗೆ 50 ರೂ. ಮಕ್ಕಳಿಗೆ 25 ರೂ.ಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರವೇಶದ ಕಾಂಬೋ ಟಿಕೆಟ್ ದರವನ್ನು ವಯಸ್ಕರಿಗೆ 130 ರೂ. ಮತ್ತು ಮಕ್ಕಳಿಗೆ 70 ರೂ. ಹೆಚ್ಚಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹಾದೇವ ಸ್ವಾಮಿ ಮಾಹಿತಿ ನೀಡಿದರು.

ಮೂರು ಪ್ರಾಣಿ ಮನೆ ನಿರ್ಮಾಣಕ್ಕೆ ಒಪ್ಪಿಗೆ: ಮೃಗಾಲಯದ ಆವರಣದಲ್ಲಿ ಆರ್‌ಬಿಐ ನೋಟು ಮುದ್ರಣಾಲಯ ವತಿಯಿಂದ ಹಾಗೂ ಇನ್ಫೋಸಿಸ್ ಪ್ರತಿಷ್ಠಾನದಿಂದ ಗೊರಿಲ್ಲ ಫ್ಯಾಮಿಲಿ ಪ್ರಾಣಿ ಮನೆ, ಓರಾಂಗೂಟಾನ್ ಮನೆ ಮತ್ತು ಕ್ಲಾತ್ ಕರಡಿ ಮನೆ ನಿರ್ಮಾಣಕ್ಕೆ ತಾಂತ್ರಿಕ ಒಪ್ಪಿಗೆ ನೀಡಲಾಯಿತು.

ಮುಖ್ಯವಾಗಿ ಮೃಗಾಲಯದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶಿವಮೊಗ್ಗ ಮೃಗಾಲಯಕ್ಕೆ ರಸ್ತೆ ಮತ್ತು ಕೆರೆಗಳ ಅಭಿವೃದ್ಧಿಗಾಗಿ 4 ಕೋಟಿ ರೂ ಅನುದಾನಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಹಂಪಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಜಿರಾಫೆ ಆವರಣದ ನಿರ್ವಹಣೆಗೆ 25 ಲಕ್ಷ ರೂ ಅಂದಾಜು ಪಟ್ಟಿಗೆ ಅನುಮೋದನೆ ನೀಡಲಾಯಿತು. ಬನ್ನೇರುಘಟ್ಟ ಮೃಗಾಲಯದಿಂದ ಹಂಪಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ನೀರಾನೆಯನ್ನು ನೀಡಲಾಗುತ್ತಿದ್ದು, ಅದಕ್ಕೆ ಆವರಣ ನಿರ್ಮಾಣ ಮಾಡಲು ಜಿಲ್ಲಾ ಖನಿಜ ಪ್ರತಿಷ್ಠಾನದ ಅಡಿಯಲ್ಲಿ ಹಂಚಿಕೆಯಾದ 62 ಲಕ್ಷ ರೂಗಳಿಗೆ ತಾಂತ್ರಿಕ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಸಂಜಯ ಎಸ್.ಬಿಜೂರು, ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ವತ್ಸಲ ಕುಮಾರಿ. ಮೃಗಾಲಯ ಪ್ರಾಧಿಕಾರದ ಸದಸ್ಯರಾದ ಮೇಯರ್ ಸುನಂದ ಪಾಲನೇತ್ರ, ಗೋಕುಲ್, ಜ್ಯೋತಿ ರೇಚಣ, ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಜಿತ್ ಎಂ. ಕುಲಕರ್ಣಿ ಇದ್ದರು.

Sneha Gowda

Recent Posts

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

2 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

24 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

40 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

2 hours ago