Categories: ಮೈಸೂರು

ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ ಆರಂಭ

ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಚೆಲುವರಾಯಸ್ವಾಮಿಯ ವೈರಮುಡಿ ಜಾತ್ರಾ ಮಹೋತ್ಸವ ಶುಕ್ರವಾರದಿಂದ ಆರಂಭವಾಗಿದೆ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರೆ ಮಾ.21ಕ್ಕ ಕೊನೆಗೊಳ್ಳಲಿದೆ. ಜಾತ್ರೆಯ ಪ್ರಮುಖ ಭಾಗವಾಗಿರುವ ವೈರಮುಡಿಯು ಮಾ.14ರಂದು ವೈಭವದಿಂದ ನೆರವೇರಲಿದೆ.

ಈ ವೈರಮುಡಿ ಎಂಬುವುದು ವಜ್ರ ಖಚಿತ ಕಿರೀಟವಾಗಿದ್ದು, ಇದು ಶ್ರೀಮಾನ್ ನಾರಾಯಣನ ಕಿರೀಟವೆಂದೂ ದ್ವಾಪರಯುಗದಲ್ಲಿ ಕೃಷ್ಣನ ಮೂಲಕ ಚೆಲುವರಾಯನಿಗೆ ಗರುಡನಿಂದ ತೊಡಿಸಿದನೆಂಬುವುದು ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠದಿಂದ ರಾಕ್ಷಸ ವಿರೋಚನ ಕದ್ದಿದ್ದ ನಾರಾಯಣನ ಕಿರೀಟವನ್ನು ಗರುಡ ರಾಕ್ಷಸನೊಂದಿಗೆ ಹೋರಾಡಿ ಮರಳಿ ತಂದು ಚೆಲುವರಾಯನಿಗೆ ಅರ್ಪಿಸಿದನೆಂಬುದು ಜನವಲಯದಲ್ಲಿರುವ ನಂಬಿಕೆಯಾಗಿದೆ. ಇದನ್ನು ಚೆಲುವರಾಯಸ್ವಾಮಿಗೆ ಧರಿಸುವ ಸಂದರ್ಭ ನಡೆಯುವ ಉತ್ಸವವೇ ವೈರಮುಡಿ ಬ್ರಹ್ಮೋತ್ಸವವಾಗಿದೆ.

ಜಾತ್ರೆಯಲ್ಲಿ ಹತ್ತು ದಿನಗಳ ಕಾಲ ನಡೆಯುವ ವಿಶೇಷತೆಯನ್ನು ನೋಡುವುದಾದರೆ, ಗರುಡನಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣದೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಈ ವೇಳೆ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಆಹ್ವಾನಿಸಲಾಗುವುತ್ತದೆ. ಆ ದಿನ ಚೆಲುವರಾಯಸ್ವಾಮಿ ಹಂಸವಾಹನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾನೆ. ಎರಡನೆಯ ದಿನ ಶ್ರೀದೇವಿ ಭೂದೇವಿಯರೊಂದಿಗೆ ಶೇಷವಾಹನದ ಸೊಬಗಾದರೆ, ಮೂರನೆಯ ದಿನ ಕಲ್ಯಾಣನಾಯಕಿ ಅಮ್ಮನವರೊಂದಿಗೆ ಬಂಗಾರದ ಪಲ್ಲಕ್ಕಿಯಲ್ಲಿ ನಾಗವಲ್ಲಿ ಮಹೋತ್ಸವದ ಮೆರವಣಿಗೆ ನಡೆಯುತ್ತದೆ. ಅಲ್ಲದೆ ಲೋಕಕಲ್ಯಾಣಾರ್ಥ ಹೋಮ ಕೂಡ ಮಾಡಲಾಗುತ್ತದೆ.

ಜಾತ್ರೆಯಲ್ಲಿ ನಾಲ್ಕನೆಯ ದಿನವು ಬಹಳ ಪ್ರಮುಖ ದಿನವಾಗಿದ್ದು ಅಂದು ರಾತ್ರಿ ಶ್ರೀದೇವಿ ಭೂದೇವಿಯರೊಂದಿಗೆ ಗರುಡಾರೂಢನಾದ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಹಾಗೂ ಬ್ರಾಹ್ಮಿ ಮುಹೂರ್ತದಲ್ಲಿ ರಾಜಮುಡಿ ಕಿರೀಟವನ್ನು ಧಾರಣೆ ಮಾಡಲಾಗುತ್ತದೆ. ಐದನೆಯ ದಿನ ಸಂಜೆ ದೇಶಿಕರ ಸನ್ನಿಧಿಯಲ್ಲಿ ಪ್ರಹ್ಲಾದ ಪರಿಪಾಲನೋತ್ಸವ ನಡೆಯುತ್ತದೆ. ಅಂದು ರಾತ್ರಿ ಬಂಗಾರದ ಗರುಡವಾಹನದಲ್ಲಿ ಅಲಂಕಾರಗೊಂಡ ಚೆಲುವರಾಯಸ್ವಾಮಿ ಭಕ್ತರಿಗೆ ದರ್ಶನ ನೀಡುತ್ತಾನೆ.

ಆರನೆಯ ದಿನ ಗಜೇಂದ್ರಮೋಕ್ಷ ಅಲಂಕಾರದ ವೈಭೋತ್ಸವ ಬಳಿಕ ಆನೆ, ಕುದುರೆ ಮಹೋತ್ಸವವು ನಡೆಯುತ್ತದೆ. ಏಳನೆಯ ದಿನ ಶ್ರೀದೇವಿ, ಭೂದೇವಿ, ಕಲ್ಯಾಣನಾಯಕಿ ಹಾಗೂ ರಾಮಾನುಜರೊಂದಿಗೆ ಮಹಾರಥೋತ್ಸವವು ನಡೆಯುತ್ತದೆ. ರಾತ್ರಿ ಬಂಗಾರದ ಪಲ್ಲಕಿ ಸೇವೆಯೂ ಜರುಗುತ್ತದೆ. ಎಂಟನೆಯ ದಿನದಂದು ಕಲ್ಯಾಣಿಯಲ್ಲಿ ಚೆಲುವರಾಯಸ್ವಾಮಿಯ ತೆಪ್ಪೋತ್ಸವವು ನಡೆಯುತ್ತದೆ. ಒಂಭತ್ತನೆಯ ದಿನ ತೀರ್ಥಸ್ನಾನ, ಅವಭೃತ ನಂತರ ಸಂಜೆ ಪರಕಾಲ ಮಠದಲ್ಲಿ ವೈಭವದಿಂದ ಪಟ್ಟಾಭಿಷೇಕ ಜರುಗುತ್ತದೆ.

ಹತ್ತನೆಯ ದಿನ ಜಾತ್ರೆಯ ಅಂತಿಮ ದಿನವಾಗಿದ್ದು ಅಂದು ಶ್ರೀಚೆಲುವರಾಯಸ್ವಾಮಿಗೆ ಮಹಾಭಿಷೇಕ ನೆರವೇರುತ್ತದೆ. ಅಲ್ಲಿಗೆ ವೈರಮುಡಿ ಜಾತ್ರೆಯ ಸಂಭ್ರಮ ಮುಗಿದು ಹೋಗುತ್ತದೆ. ಜಾತ್ರೆಗೆ ಸುತ್ತಮುತ್ತಲ ಹಳ್ಳಿಗಳಿಂದ ದೂರದ ಊರುಗಳಿಂದ ಬಂದಿದ್ದ ಸಹಸ್ರಾರು ಭಕ್ತರು ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡು ಪುನೀತರಾದ ಸಂತಸದಲ್ಲಿ ಮನೆಗೆ ತೆರಳುತ್ತಾರೆ.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸರಳವಾಗಿ ನಡಸಲಾಗಿತ್ತು. ಈ ಬಾರಿಯೂ ಸರಳವಾಗಿ ನಡೆಸಲಾಗುವುದಾಗಿ ಹೇಳಲಾಗಿತ್ತಾದರೂ ಇದೀಗ ಕೋವಿಡ್ ಇಳಿಮುಖ ವಾಗಿರುವುದರಿಂದ ಅದ್ಧೂರಿಯಾಗಿ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಹೀಗಾಗಿ ಭಕ್ತರು ಖುಷಿಯಾಗಿ ತೆರಳುತ್ತಿದ್ದಾರೆ.

Sneha Gowda

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

6 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

6 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

6 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

7 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

7 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

7 hours ago