ಮೈಸೂರು

ಮೇ.17, ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಪಿರಿಯಾಪಟ್ಟಣ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು  ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ  ಉಮಾದೇವಿ ಹೇಳಿದರು.

ಪಟ್ಟಣದ ಜಿಜೆಸಿಪಿ ಕಾಲೇಜು ಬಳಿ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ನಿಗದಿತ  ವೇತನವಿಲ್ಲದೆ ಅನಿಶ್ಚಿತೆಯಿಂದ ಬದುಕುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನದ ಭದ್ರತೆ ಕಲ್ಪಿಸಬೇಕು, ಆರ್ ಸಿ ಎಚ್ ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ನಿಗದಿತ ಅವಧಿಯೊಳಗೆ ಆಶಾ ಕಾರ್ಯಕರ್ತೆಯರಿಗೆ ತಲುಪುವಂತಾಗಬೇಕು, ಕಳೆದ ಐದಾರು ವರ್ಷಗಳಿಂದ ಸೂಕ್ತ ಸಮಯದಲ್ಲಿ ವಿತರಣೆಯಾಗದಿರುವ ಪ್ರೋತ್ಸಾಹಧನ ಹಣವನ್ನು ಒಟ್ಟಿಗೆ ನೀಡಬೇಕು ಸೇರಿದಂತೆ ಆಶಾ ಕಾರ್ಯಕರ್ತೆಯರ ಹಲವು ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ರಾಜ್ಯದ 31 ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕೆಂದು ಮನವಿ ಮಾಡಿದರು.

 ಈ ಸಂದರ್ಭ ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘಟನೆಯ ಅಧ್ಯಕ್ಷೆ ನಾಗಲಕ್ಷ್ಮಿ, ಉಪಾಧ್ಯಕ್ಷೆ ಸುಜಾತಾ,  ಕಾರ್ಯದರ್ಶಿ ಹೇಮ, ಸದಸ್ಯರಾದ ಧನಲಕ್ಷ್ಮಿ, ಪ್ರೇಮ, ರಾಣಿ, ಹೇಮಾ, ಗಿರಿಜಾ ಮತ್ತಿತರಿದ್ದರು.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

23 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

48 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago