News Karnataka Kannada
Monday, April 29 2024
ಮೈಸೂರು

ಮೈಸೂರಲ್ಲಿ ಮೂಕಸ್ಪಂದನೆ ಅಭಿಯಾನಕ್ಕೆ ಚಾಲನೆ

Mysore
Photo Credit : News Kannada

ಮೈಸೂರು: ಮೈಸೂರು ನಗರದಲ್ಲಿ ಬೇಸಿಗೆಯ ದಿನಗಳಲ್ಲಿ ಪ್ರಾಣಿ ಮತ್ತು ಪಕ್ಷಿಗಳು ಆಹಾರ ಮತ್ತು ನೀರಿಲ್ಲದೆ ತತ್ತರಿಸುವ ಸಾಧ್ಯತೆಯಿರುವುದರಿಂದ ಅವುಗಳ ರಕ್ಷಣೆಗಾಗಿ ಆಹಾರ ನೀರು ಒದಗಿಸುವ ಕಾರ್ಯಕ್ರಮವನ್ನು ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್  ಮಾಡುತ್ತಾ ಬಂದಿದೆ.

ಅದರಂತೆ ಈ ಬಾರಿಯೂ ಬೇಸಿಗೆಯ ತಾಪಮಾನದಿಂದ ಜೀವಸಂಕುಲ ತತ್ತರಿಸುವುದನ್ನು ತಡೆಯುವ ಸಲುವಾಗಿ ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್  ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದೆ.

ಈ ಅಭಿಯಾನ ಮೈಸೂರಿನ ವಿವಿಧ ಪ್ರದೇಶಗಳಲ್ಲಿ ನಡೆಯಲಿದ್ದು,  ನ್ಯಾಯಾಲಯದ ಮುಂಭಾಗ  ಮರಗಿಡಗಳಲ್ಲಿ ಆಹಾರ ನೀರಿನ ಬಟ್ಟಲು ಅಳವಡಿಸುವ ಮೂಲಕ  ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಎಲ್. ಆರ್ ಮಹದೇವಸ್ವಾಮಿ ಮೂಕ ಸ್ಪಂದನ ಅಭಿಯಾನಕ್ಕೆ  ಚಾಲನೆ ನೀಡಿದ್ದಾರೆ.

ಈ ವೇಳೆ  ಮಾತನಾಡಿದ ಅವರು  ಭೂಮಿಯ ಮೇಲೆ ಕಾಲದ ಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು‌‌ ಜೀವಿಸುವುದು  ಪ್ರತಿಯೊಬ್ಬರ ಕರ್ತವ್ಯ, ಮನುಷ್ಯ ಪ್ರತಿಯೊಂದಕ್ಕೂ ಪರಿಸರದ ಮೇಲೆ ಅವಲಂಬಿತನಾಗುತ್ತಾನೆ. ಆದರೆ   ಪ್ರಾಣಿಪಕ್ಷಿಗಳ,  ಪರಿಸರ ಉಳಿಸುವ ಸೇವಾಮನೋಭಾವ ಬೆಳಸಿಕೊಳ್ಳಬೇಕು, ಹೆಚ್ಚು ಸಸಿಗಳನ್ನು ನೆಡಲು ಮುಂದಾದರೆ ಪ್ರಾಣಿಪಕ್ಷಿಗಳ ರಕ್ಷಣೆಯಾಗುತ್ತದೆ, ಭವಿಷ್ಯದ ಪರಿಸರ ಸಂರಕ್ಷಣೆಯ ಪರಿಕಲ್ಪನೆಯ ನಿಟ್ಟಿನಲ್ಲಿ ಮೈಸೂರು ಅರಸರು ಮೃಗಾಲಯ  ಕುಕ್ಕರಹಳ್ಳಿ ಕೆರೆ ಕಾರಂಜಿ ಕೆರೆ ಮಾದರಿ ಬಡಾವಣೆಗಳ ಉದ್ಯಾನವನಗಳನ್ನು ನಿರ್ಮಿಸಿದ್ದು, ಅದನ್ನು ಉಳಿಸಿಕೊಂಡು ಹೋಗುವುದು ಕರ್ತವ್ಯ ಎಂದರು.

ಹಿರಿಯ ಸಮಾಜ ಸೇವಕ ಕೆ ರಘುರಾಂ ವಾಜಪೇಯಿ ಮಾತನಾಡಿ, ಮೊದಲೆಲ್ಲ ಮೈಸೂರಿನ ಪ್ರತಿ ಮನೆಗಳ ಮುಂದೆ ಹಸು, ಕರು  ಪಕ್ಷಿಗಳು ನೀರು ಕುಡಿಯಲು ಕಲ್ಲಿನ ನೀರಿನ ತೊಟ್ಟಿ ಯನ್ನು ಮನೆ ಮುಂದೆ ಸ್ಥಾಪಿಸುತ್ತಿದ್ದರು ಪಶು ಪಕ್ಷಿಗಳು ಆನಂದದಿಂದ  ನೀರು ಕುಡಿದು ಬಾಯಾರಿಕೆ ತಣಿಸಿಕೊಳ್ಳುತ್ತಿದ್ದವು. ಆದರೆ ಈಗ ಅವುಗಳೆಲ್ಲ ಕಣ್ಮರೆ ಆಗಿರುವುದು ವಿಷಾದದ ಸಂಗತಿ ಎಂದರು.

ಮೈಸೂರು ವಕೀಲರ ಸಂಘದ ಅಧ್ಯಕ್ಷ  ಎಂ. ಮಹದೇವಸ್ವಾಮಿ, ಕಾರ್ಯದರ್ಶಿ ಉಮೇಶ್ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ವಕೀಲರಾದ ಕವಿತಾ ಕಹಳೆ, ಕೆ ಎಂ ಕೆ ಚಾರಿಟಬಲ್ ಟ್ರಸ್ಟ್  ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪರಿಸರ ಸ್ನೇಹಿ ಜನದ ಅಧ್ಯಕ್ಷ ಲೋಹಿತ್, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ಎಸ್ ಎನ್ ರಾಜೇಶ್, ಸುಚೇಂದ್ರ, ಕಾರ್ತಿಕ್ ಮರಿಯಪ್ಪ, ಚಕ್ರಪಾಣಿ, ನವೀನ್, ಧನರಾಜ್, ಮಂಜುನಾಥ್, ರಾಜೇಶ್ ಕುಂಚಿಟಿಗ ಮೊದಲಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು