Categories: ಮೈಸೂರು

ಮೈಸೂರಿನಲ್ಲಿ ಡೆಂಗೀ, ಚಿಕನ್ ಗುನ್ಯಾ ಜಾಗೃತಿ ಕಾರ್ಯಕ್ರಮ

ಮೈಸೂರು: ರಾಷ್ಟ್ರೀಯ ಡೆಂಗೀ ದಿನಾಚರಣೆ ಅಂಗವಾಗಿ ನಗರದ ಮಂಡಿ ಮೊಹಲ್ಲಾ ಹಾಗೂ ಮೇದರ್ ಬ್ಲಾಕ್ ಸುತ್ತಮುತ್ತ ನಿವಾಸಿಗಳಿಗೂ ಹಾಗೂ ವ್ಯಾಪಾರಸ್ಥರಿಗೆ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಡೆಂಗೀ ಹಾಗೂ ಚಿಕನ್ ಗುನ್ಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯ ನಡೆಯಿತು.

ಡೆಂಗೀ ಹಾಗೂ ಚಿಕನ್ ಗುನ್ಯಾ ಹಾಗೂ ಸ್ವಚ್ಛತೆಯ ಬಗ್ಗೆ ಜಾಗೃತಿಯ ಭಿತ್ತಿಪತ್ರ ಹಿಡಿದು ಕರಪತ್ರ ನೀಡಿ ಅರಿವು ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸೊಳ್ಳೆಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿ ಮುಖ್ಯವಾಗಿದೆ. ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣದಲ್ಲಿ ಮುತುವರ್ಜಿ ವಹಿಸದಿದ್ದರೆ ಸೊಳ್ಳೆಗಳ ನಿಯಂತ್ರಣ ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು. ಡೆಂಗೀ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಾವೆಲ್ಲರೂ ಮುಂದಾಗಬೇಕು. ಹಿಂದುಳಿದ ಪ್ರದೇಶಗಳಲ್ಲಿ ತೆರಳಿ ಅರಿವು ಮೂಡಿಸುವ ಜಾಗೃತಿ ಕಾರ್ಯವನ್ನು ಇನ್ನೂ ಹೆಚ್ಚಾಗಿ ಮಾಡೋಣ. ಇತರ ಸಂಘಟನೆಗಳು ನಗರ ಮತ್ತು ಹಳ್ಳಿಗಳಲ್ಲಿ ಡೆಂಗ್ಯೂ ಜ್ವರ ಹಾಗೂ ಚಿಕನ್ ಗುನ್ಯಾ ಬಗ್ಗೆ ಇನ್ನೂ ಹೆಚ್ಚು ಹೆಚ್ಚು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಮಳೆಗಾಲ ಆರಂಭವಾಗಿರುವುದರಿಂದ ನೀರಿನ ಸೌಲಭ್ಯ ಕಡಿಮೆಯಾಗಿ ಜನರಲ್ಲಿ ನೀರು ಶೇಖರಣೆ ಮಾಡಿಟ್ಟುಕೊಳ್ಳುವ ಹವ್ಯಾಸ ಹೆಚ್ಚಾಗುತ್ತದೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಕಂಡುಬರುತ್ತದೆ ಡೆಂಗೀ, ಚಿಕನ್ ಗುನ್ಯಾ ರೋಗಗಳು ವ್ಯಾಪಕವಾಗಿ ಹರಡುವ ಸಂಭವವಿರುವುದರಿಂದ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಮುತ್ತಣ್ಣ, ಕೇಬಲ್ ವಿಜಿ, ಸೂರಜ್, ಸದಾಶಿವ್, ಚಂದ್ರು, ಶಶಿ, ವೈದ್ಯರಾದ ಮಮತಾ, ರಶ್ಮಿ, ಸುರೇಶ್, ಪೂಜಾ, ಭಾರತಿ, ರೇವಜಿತ್ ಇನ್ನಿತರರು ಹಾಜರಿದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago