Categories: ಮೈಸೂರು

ಮೈಸೂರಿನಲ್ಲಿ ಮೇ.19ರಿಂದ ಲಘು ಉದ್ಯೋಗ ಭಾರತ್ ಮೇಳ

ಮೈಸೂರು: ಲಘು ಉದ್ಯೋಗ ಭಾರತ್ ಹಾಗೂ ಸಿಎಫ್‌ಟಿಆರ್‌ಐನ ಸಹಯೋಗದಲ್ಲಿ ಆಯೋಜಿಸಲಾಗಿರುವ ಟೆಕ್ ಭಾರತ್-2022ರ ಮೂರನೇ ಅವೃತ್ತಿಯು ಮೇ 19ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ಸಿಎಫ್‌ಟಿಆರ್‌ಐನ ನಿರ್ದೇಶಕರಾದ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ತಿಳಿಸಿದರು.

ನಗರದ ಸಿಎಫ್‌ಟಿಆರ್‌ಐ ಕೇಂದ್ರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಸಿಎಫ್‌ಟಿಆರ್‌ಐ ಕೇಂದ್ರದ ಆವರಣದಲ್ಲಿ ನಡೆಯುತ್ತದೆ.ವಿ ಚಾರಗೋಷ್ಠಿಗಳಿಗೆ ನೋಂದಣಿಯಾಗಿರುವವರಿಗೆ ಮಾತ್ರ ಪ್ರವೇಶವಿದೆ. ವಸ್ತುಪ್ರದರ್ಶನವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಕೃಷಿ ತಂತ್ರಜ್ಞಾನ, ಆಹಾರ ಸಂಸ್ಕರಣೆ, ಆಹಾರ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರದರ್ಶನ ಮಳಿಗೆಗಳನ್ನು 100ಕ್ಕೂ ಹೆಚ್ಚು ಕಂಪೆನಿಗಳು ತೆರೆಯಲಿವೆ. ಅಲ್ಲದೇ ಡ್ರೋನ್ ತಂತ್ರಜ್ಞಾನದ ಮೂಲಕ ಬೆಳೆಗಳಿಗೆ ಔಷಧ ಸಿಂಪಡಣೆ ಹಾಗೂ ಬೆಳೆಗಳ ಇನ್ನಿತರ ಅಂಶಗಳನ್ನು ತಿಳಿದುಕೊಳ್ಳುವ ವಿಚಾರವಾಗಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೈತರಿಗೆ ಉಪನ್ಯಾಸಗಳ ಜತೆಗೆ ಯಶಸ್ವಿ ಉದ್ಯಮಿಗಳ ಜತೆ ಸಂವಾದ ಏರ್ಪಡಿಸಲಾಗಿದೆ. ಆಹಾರ ಉದ್ಯಮದಲ್ಲಿ ಹೆಸರುವಾಸಿಯಾಗಿರುವ ಚಂದರ್ ಬಾಲ್ಜಿ, ಪರೂಲ್‌ಸೋನಿ, ಕೆ.ಎನ್.ವಾಸುದೇವ ಅಡಿಗ ಮತ್ತಿತರರು ಭಾಗವಹಿಸಿ ತಾವು ಎಂತಹ ಪದಾರ್ಥವನ್ನು ನಿರೀಕ್ಷೆ ಮಾಡುತ್ತೇವೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ. ಆದೇ ರೀತಿ ಅಂತಾರಾಷ್ಟ್ರೀಯ ಮಟ್ಟದ ಅಮೆಜಾನ್, ನೆದರ್‌ಲ್ಯಾಂಡ್ ಮೂಲದ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸಮ್ಮೇಳನದ ಅಂಗವಾಗಿ ಸಿಎಫ್‌ಟಿಆರ್‌ಐನ 22 ತಂತ್ರಜ್ಞಾನಗಳ ಮಾಹಿತಿಯನ್ನು ಅಂತರ್ಜಾಲಕ್ಕೆ ಉಚಿತವಾಗಿ ಸೇರ್ಪಡೆ ಮಾಡಲಾಗುತ್ತದೆ. ರಾಗಿ ಆಧಾರಿತ ಬ್ರೆಡ್ ತಯಾರಿಕೆ, ಕುಚುವಲಕ್ಕಿ ತಂತ್ರಜ್ಞಾನ ಸೇರಿದಂತೆ ಇತರೆ ತಂತ್ರಜ್ಞಾನಗಳು ಸಾರ್ವಜನಿಕರಿಗೆ ಮುಕ್ತವಾಗಿ ದೊರೆಯಲಿವೆ. ಅಲ್ಲದೇ ಈ ತಂತ್ರಜ್ಞಾನಗಳ ಬಗ್ಗೆ ಇನ್ನೂ ಹೆಚ್ಚಿನ ವಿವರಣೆಗಳನ್ನು ಬಯಸಿದರೆ ಅಂತಹವರಿಗೆ ನಮ್ಮ ಕೇಂzದ ಮೂಲಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಿಎಫ್‌ಟಿಆರ್‌ಐನ ದೋಸೆ-ಇಡ್ಲಿ ತಯಾರಿಕಾ ತಂತ್ರಜ್ಞಾನ ಸುಮಾರು 300 ಕೋಟಿ ರೂಪಾಯಿ ವಹಿವಾಟು ನಡೆಸಿದೆ. 200ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಈ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಉದ್ಯಮ ಸ್ಥಾಪನೆ ಮಾಡಿ ಯಶ್ವಸಿಯಾಗಿವೆ ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಸಂಸ್ಥೆಯ ಛಾಯ ನಂಜಪ್ಪ, ಸಿ.ಎನ್.ಭೋಜರಾಜ್, ಡಾ.ವಿ.ಬಿ.ಸತ್ಯೇಂದ್ರರಾವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Gayathri SG

Recent Posts

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

13 mins ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

25 mins ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

8 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

8 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

9 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

9 hours ago