ಮೈಸೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಸೋಂಕು 9 ವರ್ಷದ ಬಾಲಕಿಯಲ್ಲಿ ಪತ್ತೆಯಗಿದೆ.ಸದ್ಯ ಇವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಸದ್ಯ ಬಾಲಕಿಗೆ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ತಿಳಿಸಿದ್ದಾರೆ.
ಬಾಲಕಿ ಹಾಗೂ ಆಕೆಯ ಪೋಷಕರು ಸ್ವಿಝರ್ ಲ್ಯಾಂಡ್ ನಿಂದ ಅಬುಧಾಬಿಗೆ ಬಂದು ಎರಡು ದಿನ ತಂಗಿದ್ದರು. ನಂತರ, ಅವರು ಡಿ.19ರಂದು ಮೈಸೂರಿಗೆ ಬಂದಿದ್ದರು. ಈ ವೇಳೆ ಅವರ ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗೆ ತೆಗೆದು ಕೊಳ್ಳಲಾಗಿತ್ತು. ಬುಧವಾರ ವರದಿ ಬಂದಿದೆ.