Categories: ಮೈಸೂರು

ಮೈಸೂರಿನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ

ಮೈಸೂರು: ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ನಗರದ ಸೀತಾ ವಿಲಾಸ   ರಸ್ತೆಯಲ್ಲಿರುವ ಸೀತಾರಾಮ ಸ್ವಾಮಿ ದೇವಸ್ಥಾನದ ಆವರಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಯಶೋದಮ್ಮ (ವಕೀಲರ ಕ್ಷೇತ್ರ ), ಭಾರತಿ (ಸಾಹಿತ್ಯ ಕ್ಷೇತ್ರ ), ಚಾರುಲತಾ ಮೋಹನ್ (ಧಾರ್ಮಿಕ ಕ್ಷೇತ್ರ ), ಸುರಕ್ಷಾ ಅಂಗನವಾಡಿ (ಸಾಮಾಜಿಕ ಕ್ಷೇತ್ರ ), ಮಮತಾ (ವೈದ್ಯಕೀಯ ಕ್ಷೇತ್ರ ), ರೂಪ ನಾಗರಾಜ್ (ಸಾಂಸ್ಕೃತಿಕ ಕ್ಷೇತ್ರ ),ಪುಷ್ಪಲತಾ (ಕರೋಣಾ  ವಾರಿಯರ್ ),ಪಾರ್ವತಮ್ಮ ಪೌರ ಕಾರ್ಮಿಕರು (ಸ್ವಚ್ಚತಾ ಕ್ಷೇತ್ರ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಅವರು ಹಿಂದಿನ ಕಾಲದಲ್ಲಿ ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತವಾಗಿದ್ದಳು. ಬೆಳಗಿನ ಜಾವ ಕೋಳಿ ಕೂಗುವ ಮುನ್ನವೇ ಎದ್ದು ಮನೆಯಲ್ಲಿ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಳು. ಆದರೆ ಈಗ ಕಾಲ ಬದಲಾಗಿದೆ. ಪುರಷ ಪ್ರಧಾನ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮಹಿಳೆ ಪುರುಷನಿಗೆ ಸರಿಸಮಾನವಾಗಿ ನಿಂತಿದ್ದಾಳೆ. ಆದರೂ ಮಹಿಳೆಯ ಮೇಲಿನ ಶೋಷಣೆ ಇನ್ನು ನಿಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇಳೆಯಾಳ್ವಾರ್ ಸ್ವಾಮೀಜಿ ,ಕಾಂತಿಲಾಲ್ ಜೈನ್ ,ಚಾಮರಾಜ ಕ್ಷೇತ್ರದ ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಲಕ್ಷ್ಮಿ, ವಿಘ್ನೇಶ್ವರ ಭಟ್, ಶ್ರೀನಿವಾಸ್, ಚಾಮರಾಜ  ಕ್ಷೇತ್ರದ ಬಿಜೆಪಿ  ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಪಾಪಣ್ಣ, ಸುದರ್ಶನ್, ಸನತ್, ಶಿವು, ರಚನ, ಸುಕನ್ಯಾ, ಇನ್ನಿತರರು ಇದ್ದರು.

Sneha Gowda

Recent Posts

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

14 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

50 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago