Categories: ಮೈಸೂರು

ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು

ಮೈಸೂರು: ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ  1,848  ಮಂದಿಗೆ ಸೋಂಕು ದೃಢವಾಗಿದ್ದು, ಚಿಕಿತ್ಸೆ ಫಲಿಸದೆ ಮೂವರು ಮೃತಪಟ್ಟಿದ್ದಾರೆ. ಇನ್ನೊಂದೆಡೆ ಕೋವಿಡ್ ಪಾಸಿಟಿವಿಟಿ ದರ ಶೇ.29.98ಕ್ಕೆ ಏರಿಕೆಯಾಗುತ್ತಿರುವುದು ಆತಂಕ ತಂದಿದೆ.

ಗುರುವಾರ 6164 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ 96 ಮಕ್ಕಳು ಸೇರಿದಂತೆ ಒಟ್ಟು 1848 ಮಂದಿಗೆ ಸೋಂಕು ಹರಡಿದೆ. ಈ ಮೂಲಕ ಜಿಲ್ಲೆಯಲ್ಲಿ ಗುಣಮುಖರಾದವರ ಪ್ರಮಾಣ 31.66ರಷ್ಟಿದ್ದು, ಮರಣ ಪ್ರಮಾಣ ಶೇ.0.16ರಷ್ಟಿದೆ.

ಜಿಲ್ಲೆಯಲ್ಲಿ 1,90,462 ಮಂದಿಗೆ ಸೋಂಕು ಹರಡಿದ್ದು, ಗುಣಮುಖರಾದವರ ಸಂಖ್ಯೆ 1,79,623ರಷ್ಟಿದೆ. ಮಂಗಳವಾರ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆಯೂ ಹೆಚ್ಚಾಗಿದ್ದು, ವಿವಿಧ ಆಸ್ಪತ್ರೆ ಮತ್ತು ಹೋಂ ಐಸೋಲೇಷನ್‌ನಲ್ಲಿದ್ದವರಲ್ಲಿ 585 ಮಂದಿ ಗುಣಮುಖರಾಗಿದ್ದಾರೆ. ಸಧ್ಯಕ್ಕೆ ಜಿಲ್ಲೆಯಲ್ಲಿ 8,401 ಸಕ್ರಿಯ ಪ್ರಕರಣಗಳಿದ್ದು, ಕಳೆದೊಂದು ವಾರದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಹಾಗೆಯೇ ಸೋಂಕಿಗೆ ಮೂವರು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 2431ಕ್ಕೆ ಹೆಚ್ಚಿದೆ.

ಮೈಸೂರು ನಗರದಲ್ಲಿ 1347, ಕೆ.ಆರ್.ನಗರ 74, ಮೈಸೂರು ತಾಲೂಕು 69, ನಂಜನಗೂಡು 83, ಪಿರಿಯಾಪಟ್ಟಣ 62, ತಿ.ನರಸೀಪುರದಲ್ಲಿ 107, ಹುಣಸೂರು 16, ಎಚ್.ಡಿ.ಕೋಟೆಯಲ್ಲಿ 22, ಸಾಲಿಗ್ರಾಮದಲ್ಲಿ 21 ಪ್ರಕರಣ ದಾಖಲಾಗಿದ್ದರೆ ಸರಗೂರು ತಾಲೂಕಿನಲ್ಲಿ 2 ಪ್ರಕರಣ ದಾಖಲಾಗಿದೆ. 5 ವರ್ಷ ಒಳಪಟ್ಟ 13 ಮಕ್ಕಳಲ್ಲಿ, 6ರಿಂದ 10 ವರ್ಷದ ಒಳಗಿನ 18 ಮತ್ತು 10ರಿಂದ 17 ವರ್ಷದೊಳಗಿನ 65 ಮಕ್ಕಳು ಸೇರಿದಂತೆ ಒಟ್ಟು 80 ಮಕ್ಕಳಿಗೆ ಸೋಂಕು ಹರಡಿದೆ.

ಇದೆಲ್ಲದರ ನಡುವೆ ವೀಕೆಂಡ್ ಕರ್ಫ್ಯೂನಿಂದಾಗಿ ಸದಾ ತುಂಬಿ ತುಳುಕುತ್ತಿದ್ದ ಮೈಸೂರು ಅರಮನೆ, ಚಾಮರಾಜೇಂದ್ರ ಮೃಗಾಲಯ ಸೇರಿದಂತೆ ಇತರೆ ಪ್ರವಾಸಿತಾಣಗಳ ಭಣಗುಟ್ಟುತ್ತಾ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕಾರಣ ವೀಕೆಂಡ್ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಆದೇಶ ವಾಪಸ್ ಪಡೆಯುವಂತೆ ವ್ಯಾಪಾರಸ್ಥರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

 

Swathi MG

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

18 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

36 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

53 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

2 hours ago