News Karnataka Kannada
Tuesday, May 07 2024
ಮೈಸೂರು

ಮೈಸೂರಿನ ಕರಾಮುವಿಯಲ್ಲಿ ಏಪ್ರಿಲ್ 7 ರಂದು ಉದ್ಯೋಗ ಮೇಳ

Latest News
Photo Credit :
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು  ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ  ಆವರಣದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುತ್ತಿದ್ದು, ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳು ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಉದ್ಯೋಗ ಮೇಳವು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಯ್ಕೆಯಾಗದವರಿಗೆ ತಮ್ಮ ಇಚ್ಛೆಯ ಅನುಸಾರವಾಗಿ ತರಬೇತಿ ನೀಡಿ ಉದ್ಯೋಗವನ್ನು ದೊರಕಿಸಿಕೊಡಲಾಗುವುದು. ಹಾಗೆಯೇ ಸುತ್ತಮುತ್ತಲಿನ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಲಾಗುವುದು. 6000 ಜನರಿಗೆ ಉದ್ಯೋಗ ನೀಡುವ ಭರವಸೆ ಇದೆ ಎಂದರು.
ಉದ್ಯೋಗ ಆಕಾಂಕ್ಷೆಗಳು ಈ ಕೆಳಕಂಡ ಲಿಂಕ್ ಮೂಲಕ ನೋಂದಣಿ ಮಾಡಿಸಬಹುದು. http://skillconnect.kaushalkar.com/app/student-jobfair‌ ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8722399936 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ       ಡಾ. ಲೋಕೇಶ ಆರ್ ರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:-
ಡಾ. ಲೋಕೇಶ ಆರ್ ,
ಪ್ರಾದೇಶಿಕ ನಿರ್ದೇಶಕರು,
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,
ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟಿ-ವೀರಸಾಗರ, ತುಮಕೂರು-572 105.
 ☎0816-2955580. 📱9844506629.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು