Categories: ಮೈಸೂರು

ಮೈಸೂರಿನ ಕರಾಮುವಿಯಲ್ಲಿ ಏಪ್ರಿಲ್ 7 ರಂದು ಉದ್ಯೋಗ ಮೇಳ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು  ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ  ಆವರಣದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುತ್ತಿದ್ದು, ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳು ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಉದ್ಯೋಗ ಮೇಳವು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಯ್ಕೆಯಾಗದವರಿಗೆ ತಮ್ಮ ಇಚ್ಛೆಯ ಅನುಸಾರವಾಗಿ ತರಬೇತಿ ನೀಡಿ ಉದ್ಯೋಗವನ್ನು ದೊರಕಿಸಿಕೊಡಲಾಗುವುದು. ಹಾಗೆಯೇ ಸುತ್ತಮುತ್ತಲಿನ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಲಾಗುವುದು. 6000 ಜನರಿಗೆ ಉದ್ಯೋಗ ನೀಡುವ ಭರವಸೆ ಇದೆ ಎಂದರು.
ಉದ್ಯೋಗ ಆಕಾಂಕ್ಷೆಗಳು ಈ ಕೆಳಕಂಡ ಲಿಂಕ್ ಮೂಲಕ ನೋಂದಣಿ ಮಾಡಿಸಬಹುದು. http://skillconnect.kaushalkar.com/app/student-jobfair‌ ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8722399936 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ       ಡಾ. ಲೋಕೇಶ ಆರ್ ರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:-
ಡಾ. ಲೋಕೇಶ ಆರ್ ,
ಪ್ರಾದೇಶಿಕ ನಿರ್ದೇಶಕರು,
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,
ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟಿ-ವೀರಸಾಗರ, ತುಮಕೂರು-572 105.
0816-2955580. 9844506629.
Sneha Gowda

Recent Posts

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

2 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

5 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

16 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

25 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

28 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

43 mins ago