News Karnataka Kannada
Friday, May 03 2024
ಮೈಸೂರು

ಮೈಸೂರು ಎರಡು ಖಾಸಗಿ ಕಾಲೇಜಿನ 48 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

Covid
Photo Credit :

ಮೈಸೂರು: ಬೆಂಗಳೂರು ಹಾಗೂ ಧಾರವಾಡದ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಇದೀಗಮೈಸೂರಿನ ಕಾಲೇಜು ವಿದ್ಯಾರ್ಥಿಗಳಲ್ಲೂ ಸೋಂಕು ಹರಡುತ್ತಿದೆ.

ಕಳೆದ ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಅಂಟಿರುವುದು ದೃಢಪಟ್ಟಿದೆ.

ಮೈಸೂರಿನ ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರಲ್ಲಿ 48 ಮಂದಿಗೆ ಸೋಂಕು ತಗುಲಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಒಂದು ವಾರದ ಅವಧಿಯಲ್ಲಿ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಇದು ಕ್ಲಸ್ಟರ್ ಪ್ರಕರಣವಾದ್ದರಿಂದ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.

ಸೋಂಕು ತಗುಲಿರುವ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದು, ಹೆಚ್ಚಿನವರು ಲಕ್ಷಣರಹಿತರಾಗಿದ್ದಾರೆ ಎಂದು ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ಎರಡನೇ ಅಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯ ಜನರು ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದರು. ಇದೀಗ ವಿದ್ಯಾರ್ಥಿಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವುದು ವಿದ್ಯಾರ್ಥಿಗಳು ಸೇರಿದಂತೆ ಪೋಷಕರನ್ನು ಆತಂಕಕ್ಕೀಡು ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು