News Karnataka Kannada
Saturday, May 04 2024
ಮೈಸೂರು

ಮೈಸೂರಿನಲ್ಲಿ ಜ.24ರಿಂದ ಶಾಲೆ ಆರಂಭ

Mysuru Dc
Photo Credit : News Kannada

ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆಯ ಕ್ರಮಗಳನ್ನು ಒಳಗೊಂಡಂತೆ ಜ.24ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಎಂದಿನಂತೆ ಪ್ರಾರಂಭಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ.

ಮೈಸೂರು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿ ಶಾಲೆಗಳಲ್ಲಿ ಕೋವಿಡ್-19ರ ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜ.24ರಿಂದ ಭೌತಿಕ ತರಗತಿಗಳನ್ನು ಎಂದಿನಂತೆ ನಡೆಸುವಂತೆ ಆದೇಶ ಪ್ರತಿಯಲ್ಲಿ ಸೂಚಿಸಿದ್ದಾರೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ 1 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಸುರಕ್ಷತೆಯೊಂದಿಗೆ ಭೌತಿಕ ತರಗತಿಗಳನ್ನು ನಡೆಸಲಾಗುತ್ತಿತ್ತು. ಇದರಿಂದ ತಾಲ್ಲೂಕನ್ನೇ ಘಟಕವೆಂದು ಪರಿಗಣಿಸಿ ಶಾಲೆಗಳನ್ನು ನಡೆಸಲಾಗುತ್ತಿತ್ತು.

ಆದರೀಗ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನೇ ಘಟಕವೆಂದು ಪರಿಗಣಿಸಿ ತಾಲೂಕು ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಸೀಲ್ದಾರ್ ಅವರ ತ್ರಿಸದಸ್ಯ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ, ಡಿಡಿಪಿಐ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರು ನೀಡಿರುವ ಶಿಫಾರಸ್ಸಿನ ಮೇರೆಗೆ ಶಾಲೆಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು